ಕುಡಿಯುವ ನೀರಿನ ಘಟಕ ದುರಸ್ತಿಗೆ ಸೂಚನೆ

IMG-20230626-WA0175
ಆಲೂರು ಪಟ್ಟಣದಲ್ಲಿ ಕೆಟ್ಟು ನಿಂತರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲಿಸಿದರು. ಡಾ.ಜಯರಾಜ್, ಧನಂಜಯ, ಸತೀಶ್, ರಾಜಕುಮಾರ್ ಇತರರು ಇದ್ದರು.
Published on


ಆಲೂರು: ಪಟ್ಟಣದ ಆಸ್ಪತ್ರೆ ಮುಂಭಾಗದ ಸಂತೆ ಮೈದಾನದಲ್ಲಿರುವ ಶುದ್ಧ ನೀರಿನ ಘಟಕ ಕೆಟ್ಟು ವರ್ಷಗಳೇ ಕಳೆದರೂ ದುರಸ್ತಿಪಡಿಸದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದರು.

ಐದಾರು ವರ್ಷಗಳ ಹಿಂದೆ ಶುದ್ಧ ನೀರಿನ ಘಟಕ ನಿರ್ಮಿಸಿದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಪಟ್ಟಣದಲ್ಲಿ ಮೂರು ಘಟಕಗಳಿದ್ದು, ಧರ್ಮಸ್ಥಳ ಸಂಘದಿಂದ ನಿರ್ಮಿಸಿದ ನೀರಿನ ಘಟಕ ಹೊರತುಪಡಿಸಿ ಬೇರೆ ಯಾವುದೇ ಘಟಕಗಳು ಕೆಲಸ ಮಾಡುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.
ಇದಕ್ಕೆ ಸ್ಪಂದಿಸಿದ ಶಾಸಕರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೊಟ್ಯಾನ್ ಅವರನ್ನು ಸ್ಥಳಕ್ಕೆ ಕರೆಸಿ ಶುದ್ಧ ನೀರಿನ ಘಟಕವನ್ನು ಪರಿಶೀಲಿಸಿದರು. ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು ತುಕ್ಕು ಹಿಡಿಯುತ್ತಿವೆ. ಇದಕ್ಕೆ ಜವಾಬ್ದಾರಿ ಯಾರು ಎಂದು ಅಸಮಾಧಾನವ್ಯಕ್ತಪಡಿಸಿದರು. ತಕ್ಷಣ ದುರಸ್ತಿಪಡಿಸಿ ಪಟ್ಟಣದ ನಾಗರಿಕರಿಗೆ ಶುದ್ಧ ನೀರು ಒದಗಿಸಲು ಮುಂದಾಗಬೇಕು ಎಂದು ಸೂಚಿಸಿದರು.

ಸರ್ಕಾರದ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಆಲೂರು ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಶುದ್ಧ ನೀರಿನ ಘಟಕಗಳನ್ನು ಚಾಲನೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಬಿಜೆಪಿ ಮುಖಂಡ ಡಾ.ಜಯರಾಜ್, ಧನಂಜಯ, ಸತೀಶ್, ರಾಜಕುಮಾರ್, ದೊರೇಗೌಡ, ರಂಗಸ್ವಾಮಿ,ಪ್ರದೀಪ್‌ಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net