ಕುಡಿಯುವ ನೀರಿನ ಘಟಕಕ್ಕೆ ಚಾಲನೆ

H26 Water Plant 1
Published on

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾಕರಸಾ) ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಬುಧವಾರ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 2 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಯ ಅನುಕೂಲಕ್ಕಾಗಿ ವಿಭಾಗದ ಎಲ್ಲ ಘಟಕಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿದೆ. ಅಶುದ್ಧ ನೀರಿನಿಂದ ಹಲವು ಕಾಯಿಲೆಗಳು ಬರುತ್ತವೆ. ಆ ಹಿನ್ನೆಲೆಯಲ್ಲಿ ಸಿಬ್ಬಂದಿಯ ಹಿತದೃಷ್ಟಿಯಿಂದ ಘಟಕ ಆರಂಭಿಸಲಾಗಿದೆ ಎಂದರು.

ಸಾರ್ವಜನಿಕರ ಮಧ್ಯೆ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸಾರಿಗೆ ನೌಕರರಿಗಿದೆ. ಹಾಗಾಗಿ, ಎಲ್ಲರೂ ಸೂಕ್ತ ಸುರಕ್ಷಾ ಕ್ರಮ ಕೈಗೊಳ್ಳಬೇಕು. ಕರೊನಾ ಲಕ್ಷಣಗಳು ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ಇದ್ದರೆ ಧೈರ್ಯವಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಆ ನಿಟ್ಟಿನಲ್ಲಿ ಸಂಸ್ಥೆ ಎಲ್ಲ ರೀತಿಯ ನೆರವು ನೀಡುತ್ತದೆ ಎಂದರು. ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ, ಕಾರ್ವಿುಕ ಕಲ್ಯಾಣ ಅಧಿಕಾರಿ ನಾಗಮಣಿ ಭೋವಿ, ಉಗ್ರಾಣ ಅಧಿಕಾರಿ ಹೊಸಮನಿ ಎಂ., ಘಟಕ ವ್ಯವಸ್ಥಾಪಕ ಸದಾನಂದ ಒಡೆಯರ, ಸಂಚಾರ ಅಧೀಕ್ಷಕ ಮುನ್ನಾಸಾಬ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net