ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ

05 yelandur 01
Published on

ಯಳಂದೂರು: ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಹಲವು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿದ್ದ ಹಿನ್ನೆಲೆಯಲ್ಲಿ ಪಿಡಿಒ ಎಚ್ಚತ್ತು ದುರಸ್ತಿಪಡಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಿದ್ದಾರೆ.


ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಪಡೆದು ನೀರು ಪೋಲಾಗುತ್ತಿರುವ ಬಗ್ಗೆ ಸಾಕಷ್ಟು ಬಾರಿ ಪಿಡಿಒ ಅವರಿಗೆ ದೂರು ನೀಡಲಾಗಿದ್ದರೂ ಕ್ರಮವಹಿಸಿರಲಿಲ್ಲ ಎಂಬುದು ಸ್ಥಳೀಯರ ದೂರು. ಅಲ್ಲದೆ ಈ ಬಗ್ಗೆ ಜು.4ರಂದು ವಿಜಯವಾಣಿ ಯಲ್ಲಿ 3 ತಿಂಗಳಿಂದ ಕುಡಿಯುವ ನೀರು ಪೋಲು ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.


ಇದರಿಂದ ಎಚ್ಚೆತ್ತ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದರಲ್ಲದೆ, ಹೊಸದಾಗಿ ಪೈಪ್‌ಗಳನ್ನು ತರಸಿ ದುರಸ್ತಿಪಡಿಸುವ ಕೆಲಸಕ್ಕೆ ಮುಂದಾಗಿದ್ದರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net