ಕುಡಿಯುವ ನೀರಿನ ಮಾದರಿ ಪರೀಕ್ಷೆಗೆ ಸೂಚನೆ

ಕುಡಿಯುವ ನೀರಿನ ಮಾದರಿ ಪರೀಕ್ಷೆಗೆ ಸೂಚನೆ
Published on

ಹಾಸನ: ಕುಡಿಯುವ ನೀರಿನಿಂದ ಹರಡುವ ರೋಗ-ರುಜಿನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತೆ ವಹಿಸಿ ಪ್ರತಿ 15 ದಿನಕ್ಕೊಮ್ಮೆ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ರೈತರ ಆತ್ಮಹತ್ಯೆ ಕುರಿತು ಪರಿಹಾರ ವಿತರಣೆಗೆ ಪರಿಶೀಲನೆ ಮಾಡುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ನಿರ್ದೇಶನ ನೀಡಿದರಲ್ಲದೆ, ಬೆಳೆ ಸರ್ವೆ ಕಾರ್ಯವನ್ನು ಚುರುಕುಗೊಳ್ಳಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಇದೇ ರೀತಿಯ ವಾತಾವರಣ ಮುಂದುವರೆದು ಮಳೆ ಆಗದಿದ್ದಲ್ಲಿ ರಾಗಿ, ಜೋಳ ಬೆಳೆ ನಷ್ಟವಾಗುವ ಸಾಧ್ಯತೆ ಇದೆ ಎಂದರು.
ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ರಸ್ತೆಗಳ ದುರಸ್ತಿಗೆ ಕ್ರಮವಹಿಸುವಂತೆ ತಿಳಿಸಿದರಲ್ಲದೆ, ಬೆಂಕಿ ಅವಘಡಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ವಹಿಸುವಂತೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net