ಕುಡಿಯುವ ನೀರಿನ ಸಮಸ್ಯೆ ನೀಗಿಸಿ

07ydg03
Published on


ಯಾದಗಿರಿ: ಗ್ರಾಮೀಣ ಭಾಗದ ಜನರಿಗೆ ಯಾವುದೇ ನೀರಿನ ಸಮಸ್ಯೆಯಾಗದಂತೆ ಶುದ್ಧ ಕುಡಿಯುವ ನೀರಿನ ಘಟಕ ಶೀಘ್ರ ರಿಪೇರಿ ಮಾಡಿ ಅನುಕೂಲ ಮಾಡಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ತಾಕೀತು ಮಾಡಿದರು.


ವಡಗೇರಾ ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಇದ್ದರೆ ಕೂಡಲೇ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ಒಳಗಾಘುತ್ತಿರುವ ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಈ ರೀತಿ ಆಗದಂತೆ ಅಧಿಕಾರಿ ವರ್ಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.

ಮಳೆ ಕೊರತೆಯಿಂದ ಈಗ ಬೆಳೆ ಹಾನಿಯಾಗುತ್ತಿದ್ದು ಕೃಷಿ ಹಾಗೂ ಕಂದಾಯ ಅಧಿಕಾರಿಗಳು ಬೆಳೆಹಾನಿ ಸಮೀಕ್ಷೆ ಸಮರ್ಪಕವಾಗಿ ಮಾಡಬೇಕಿದೆ. ವಡಗೇರಾ ತಾಲೂಕು ಬರಗಾಲ ಪೀಡಿತ ತಾಲೂಕು ಘೋಷಣೆ ಮಾಡಿದೆ. ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.
ಗ್ರಾಮ ಲೆಕ್ಕಾಧಿಕಾರಿಗಳು ತಾವು ಕಾರ್ಯನಿರ್ವಹಿಸುವ ಕೇಂದ್ರ ಸ್ಥಾನದಲ್ಲಿದ್ದು ಜನರಿಗೆ ಸಮಸ್ಯೆಯಾಗದಂತೆ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕೆಂದರು.

ಅದೇ ರೀತಿ ಹಳೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಹೊಸ ತಂತಿ ಅಳವಡಿಸಬೇಕು. ಈ ವಿಷಯದಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿ, ಕೃಷಿ ಇಲಾಖೆ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net