ಕುಡಿಯುವ ನೀರು ಯೋಜನೆಗೆ ಅನುದಾನದ ಕೊರತೆ ಇಲ್ಲ

03 YLP 05
Published on

ಯಲ್ಲಾಪುರ: ಕುಡಿಯುವ ನೀರಿನ ಪೂರೈಕೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ನೀರು ಪೂರೈಕೆ ಯೋಜನೆಗೆ ಹಣಕಾಸಿನ ಕೊರತೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ತಾಲೂಕಿನ ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಳಾಪುರದಲ್ಲಿ ನಿರ್ವಿುಸಿದ ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ವಿವಿಧೆಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಜನರು ಇವುಗಳ ಸದುಪಯೋಗ ಪಡೆಯಬೇಕು ಎಂದರು. ತಾಪಂ ಅಧ್ಯಕ್ಷೆ ಚಂದ್ರಕಲಾ ಭಟ್ಟ, ಇಡಗುಂದಿ ಗ್ರಾಪಂ ಸದಸ್ಯ ಶ್ರೀಕಾಂತ ಶೆಟ್ಟಿ, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಅಧಿಕಾರಿಗಳು ಇದ್ದರು.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net