ಕುತೂಹಲ ಮೂಡಿಸಿದ ಪ್ರಿಯಾಂಕಾ ಭೇಟಿ; ಪ್ರಕಾಶ ರಾಠೋಡ ಹೇಳಿದ್ದೇನು ಗೊತ್ತಾ?

IMG-20210217-WA0049
Published on

ವಿಜಯಪುರ: ರಾಜ್ಯದ ರೈತರ ಸಮಸ್ಯೆ ಬಗ್ಗೆ ವಿಪ ಸದಸ್ಯ ಪ್ರಕಾಶ ರಾಠೋಡ ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಮನ ಸೆಳೆದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಯಲ್ಲಿ ಪ್ರಿಯಾಂಕಾ ಅವರನ್ನು ಭೇಟಿ ಮಾಡಿರುವ ಪ್ರಕಾಶ ರಾಠೋಡ, ರಾಜ್ಯದಲ್ಲಿ ರೈತರ ಸಮಸ್ಯೆ ತಾರಕಕ್ಕೇರಿದೆ. ಅದರಲ್ಲೂ ಕಬ್ಬು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಹೋರಾಟ ಹಮ್ಮಿಕೊಳ್ಳುವ ಬಗ್ಗೆ ಸಮಾಲೋಚಿಸಿದ್ದಾಗಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದಲ್ಲಿ ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮುಂದಾಗಿದ್ದಾರೆ. ಅದೇ ತೆರನಾಗಿ ರಾಜ್ಯದಲ್ಲೂ ಸಮಸ್ಯೆಗಳಿದ್ದು ಅದಕ್ಕೂ ಪರಿಹಾರ ಕಂಡುಕೊಳ್ಳಬೇಕಿದೆ. ಮಂಡ್ಯ, ಬಾಗಲಕೋಟ, ವಿಜಯಪುರ ಮತ್ತು ಇತರೆ ಜಿಲ್ಲೆಗಳ ಕಬ್ಬು ಬೆಳೆಗಾರರ ಸಮಸ್ಯೆ ಹೆಚ್ಚಾಗಿದೆ. ನೂತನ ಕೃಷಿ ನೀತಿಯಿಂದಾಗಿ ಸರಿಯಾಗಿ ಬೆಲೆ ಸಿಗುತ್ತಿಲ್ಲ. ಹೀಗಾಗಿ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಹೋರಾಟದ ಬಗ್ಗೆ ಸವಿವರ ನೀಡುವುದಾಗಿ ಪ್ರಕಾಶ ರಾಠೋಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net