ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮ ಪಂಚಾಯಿತಿ ಆವರಣದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ, ಡಾ.ಅಂಬೇಡ್ಕರ್ ಅವರ 134ನೇ ಜಯಂತೋತ್ಸವವನ್ನು ಆಚರಿಸಲಾಯಿತು..ಗ್ರಾ.ಪಂ ಅಧ್ಯಕ್ಷ ಸುಶೀಲಾ ನಾಗರಾಜ್, ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸದಸ್ಯರು, ಸಂಘ-ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.