

ಸೊರಬ: ಬಡವರ ಏಳಿಗೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಇನ್ನುಳಿದ ಅವಯಲ್ಲಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಕುಪ್ಪಗಡ್ಡೆಯಲ್ಲಿ ಭಾನುವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ, ಜಿಪಂ, ತಾಪಂ, ಮೆಸ್ಕಾಂ, ಕುಪ್ಪಗಡ್ಡೆ ಗ್ರಾಪಂನಿಂದ ಆಯೋಜಿಸಿದ್ದ ಗ್ರಾಪಂ ಕಟ್ಟಡದ ನೂತನ ಕೊಠಡಿ ಹಾಗೂ ಮೆಸ್ಕಾಂ ನೂತನ ಶಾಖಾ ಕಚೇರಿ ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಲಾನುಭವಿಗಳಿಗೆ ಪ್ರತಿ ತಿಂಗಳು 10 ಕೋಟಿ ರೂ. ವಿನಿಯೋಗವಾಗುತ್ತಿದೆ ಎಂದು ತಿಳಿಸಿದರು.
ತಾಲೂಕಿನ ಉಳವಿ, ಕುಪ್ಪಗಡ್ಡೆ ಹಾಗೂ ಮಾವಲಿ ಗ್ರಿಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈಗಾಗಲೇ ಮಾವಲಿ ಗ್ರಿಡ್ ನಿರ್ಮಾಣವಾಗಿದೆ. ಇಂಡುವಳ್ಳಿ, ಕುಪ್ಪಗಡ್ಡೆ ಗ್ರಾಮದಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಟೆಂಡರ್ ಕರೆಯಲು ಸೂಚಿಸಲಾಗಿದೆ. ಇದರಲ್ಲಿ ಕುಪಗಡ್ಡೆ ಗ್ರಿಡ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಕೇವಲ 6 ಫೀಡರ್ ಗ್ರಿಡ್ ನಿರ್ಮಾಣಕ್ಕೆ ಅವಕಾಶವಿತ್ತು. ಆದರೆ ಇದೀಗ 20 ಫೀಡರ್ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಭಾರಿ ಮಳೆಯಿಂದ ರಸ್ತೆಗಳು ಹಾಳಾಗಿದ್ದು, ರಸ್ತೆ ಅಭಿವೃದ್ಧಿಗೆ ಅನುದಾನವಿದೆ. ಒಂದೂವರೆ ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸುವಂತೆ ಇಂಜನಿಯರ್‌ಗಳಿಗೆ ಸೂಚನೆ ನೀಡಲಾಗಿದೆ. 30 ಕೋಟಿ ರೂ. ವೆಚ್ಚದಲ್ಲಿ ಸೊರಬ- ಶಿರಾಳಕೊಪ್ಪ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಬಿ.ನೂರ್ ಅಹಮದ್, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಅನಿತಾ, ಲಲಿತಾ, ಮಮತಾ, ಮಲ್ಲಿಕಾರ್ಜುನ, ಮುಖಂಡರಾದ ಎಲ್.ಜಿ.ರಾಜಶೇಖರ್, ಪುರುಷೋತ್ತಮ, ಎಚ್.ಗಣಪತಿ, ಎಂ.ಡಿ ಶೇಖರ್, ಭಾಸ್ಕರ, ಸಂತೋಷ್, ಲಕ್ಷ್ಮೀ, ಪರಶುರಾಮ, ಯುವರಾಜ್, ರಾಜಶೇಖರ್, ಆನವಟ್ಟಿ ಮೆಸ್ಕಾಂ ಎಇಇ ಮಂಜುನಾಥ ನಾಯ್ಕ, ಪಿಡಿಒ ರಿಯಾಜ್, ಸುಮಾ ಇತರರಿದ್ದರು.