ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ಪರಿಶೀಲನೆ

IMG-20220920-WA0031.jpg
Published on

ಕುಮಟಾ:ಜಿಲ್ಲೆಯ ಕೇಂದ್ರ ಸ್ಥಾನ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಉದ್ದೇಶದಿಂದ ಮಂಗಳೂರು ದೇರಳಕಟ್ಟೆ ನಿಟ್ಟೆ ಸಂಸ್ಥೆಯ ಮುಖ್ಯಸ್ಥರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ.‌

ಕೆ.ಎಸ್.ಹೆಗ್ಡೆ ಮೆಡಿಕಲ್‌ ಕಾಲೇಜ್ ನ ಉಪ ಮುಖ್ಯಸ್ಥರಾದ ಡಾ.ಜಯಪ್ರಕಾಶ ಶೆಟ್ಟಿ ಹಾಗೂ ಇಂಜಿನಿಯರ್ ಆನಂದ ಇವರು ಕುಮಟಾಕ್ಕೆ ಭೇಟಿ ನೀಡಿ, ಲಭ್ಯವಿರುವ ಸೌಲಭ್ಯಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆರೋಗ್ಯ ಇಲಾಖೆ ಅಧಿಕಾರಿಗಳೊಟ್ಟಿಗೆ ಕುಮಟಾ‌ ಎಸಿ ಕಚೇರಿಯಲ್ಲಿ ಚರ್ಚಿಸಿದರು.

ಸಭೆಯ ನಂತರ ಡಾ.ಜಯಪ್ರಕಾಶ ಶೆಟ್ಟಿ ರವರು ಜಿಲ್ಲಾಧಿಕಾರಿಗಳ ಮುಂದೆ ಎರಡು ಪ್ರಸ್ತಾವನೆಯನ್ನು ಇಟ್ಟಿದ್ದಾರೆ. ಮೊದಲನೆಯದಾಗಿ 100 ಹಾಸಿಗೆಯುಳ್ಳ ಕುಮಟಾ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು 300 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಿ, ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ 600 ಹಾಸಿಗೆಗಳಿಗೆ ಮೇಲ್ದರ್ಜೆಗೆ ಏರಿಸಿದಲ್ಲಿ ಅದರೊಟ್ಟಿಗೆ ಕೆ.ಎಸ್.ಹೆಗಡೆ ವೈದ್ಯಕೀಯ ಮಹಾ ವಿದ್ಯಾಲಯವನ್ನು ಸೂಪರ್ ಸ್ಪೆಶಾಲಿಟಿ ಸೌಲಬ್ಯಗಳೊಂದಿಗೆ ಸ್ಥಾಪಿಸುವುದು. ಅಥವಾ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಮಾತ್ರ ಸ್ಥಾಪಿಸುವ ಬಗ್ಗೆ ತಮ್ಮ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿ ತಿಳಿಸಲಾಗುವದು ಎಂದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net