ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದೆ: ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

IMG-20200122-WA0030.jpg
Published on

ಹಾಸನ: ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿರುವ ಅನುಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಇದ್ದ ಪೊಲೀಸರೇ ಈಗಲೂ ರಾಜ್ಯದಲ್ಲಿ ಇರೋದು, ನಾವು ಹೊಸದಾಗಿ ಯಾರನ್ನೂ ನೇಮಕ‌ ಮಾಡಿಲ್ಲ ಎಂದರು.

ಪೊಲೀಸ್ ಇಲಾಖೆ ಬಗ್ಗೆ ಅನುಮಾನ ವ್ಯಕ್ತಪಡಿಸೋದಾದ್ರೆ ನಾವು ಎಲ್ಲಿಗೆ ಹೋಗ್ತೀವಿ. ಇದು ನೇರವಾಗಿ ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಜನರಲ್ಲಿ ಮೂಡಿಸುತ್ತಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳೂರು ಗಲಭೆ ಬಗ್ಗೆ ಎಲ್ಲ ಗೊತ್ತಿದ್ದರೂ ಮಾಜಿ ಸಿಎಂ ಆಗಿ ಪೊಲೀಸ್ ಇಲಾಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಇದು ನಿಜಕ್ಕೂ ದುರಾದೃಷ್ಟಕರ, ಬಾಂಬ್ ವಿಚಾರದಲ್ಲಿ ಅವರ ಅನುಮಾನ ಕೂಡ ಹಾಗೇ ಇದೆ. ಕೇವಲ ಪ್ರಚಾರಕ್ಕೆ ಮುಸಲ್ಮಾನರು ಇದರಿಂದ ತೃಪ್ತಿಯಾಗ್ತಾರೆ ಎನ್ನೋ ಭಾವನೆಯಿಂದ ಅವರು ಹೀಗೆ ಮಾಡುತ್ತಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದು ಕಿಡಿಕಾರಿದರು. ಅವರು ಮಾಜಿ ಸಿಎಂ ಎಂಬ ಜವಾಬ್ದಾರಿಯಿಂದ ಮಾತನಾಡಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net