ಕುಮಾರೇಶ್ವರ ಆಸ್ಪತ್ರೆಯ ವೈದ್ಯರ ಕ್ರೀಡಾ ಸಾಧನೆ

bkt-24-7
ವಿವಿಧ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಬಾಗಲಕೋಟೆ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆ ವೈದ್ಯರು, ವಿದ್ಯಾರ್ಥಿಗಳು. ಈ ಸಂದರ್ಭದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಇತರರು ಇದ್ದರು.
Published on

ಬಾಗಲಕೋಟೆ: ಭಾರತೀಯ ವೈದ್ಯಕೀಯ ಸಂಘದ ರಾಯಚೂರು ಶಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಮತ್ತು ಮಿಶ್ರಡಬಲ್‌ನಲ್ಲಿ ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ವೈದ್ಯರಾದ ಡಾ.ಮಂಜುದೇವ.ಎಸ್.ಎನ್ ಮತ್ತು ಡಾ.ಪ್ರಮೋದ ಅತ್ಯುತ್ತಮ ಪ್ರದರ್ಶನ ತೋರಿ ಪ್ರಥಮ ಬಹುಮಾನ ಪಡೆದಿದ್ದಾರೆ.

ಇನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಲಬುರಗಿ ವಿಭಾಗಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಎಸ್.ಎನ್.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಮತ್ತು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಈಜು ಕ್ರೀಡಾಕೂಟದಲ್ಲಿ ಎಸ್.ಎನ್.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ದೀಪ ಗಿಲ್ಡಾ ನಾಲ್ಕು ಸ್ವರ್ಣ ಪದಕಗಳನ್ನು, ನಾಲ್ಕು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಹಾಗೂ ಪ್ರಮೋದ, ರೋಹಿತ್, ಶ್ರೇಯಸ್ ತಲಾ ಒಂದೊಂದು ಕಂಚಿನ ಪದಕ ಪಡೆದರು.

ವಿದ್ಯಾರ್ಥಿಯರ ವಿಭಾಗದಲ್ಲಿ ವೈಷ್ಣವಿ, ನಯನಾ, ನಿಮಿಷಾ ಮತ್ತು ನವ್ಯಾ ತಲಾ ಒಂದೊಂದು ಕಂಚಿನ ಪದಕ ಪಡೆದರು. ಈ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತು ಡಾ.ಸಂತೋಷ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net