

ಕಲಬುರಗಿ: ಬೀದರ್ ಜಿಲ್ಲೆಯ ಸಹಕಾರಿ ಬ್ಯಾಂಕ್ ಮೇಲೆ ಶುಕ್ರವಾರ ಬೆಳಗ್ಗೆ ಏಕಾಏಕಿ ಐಟಿ ದಾಳಿ ಮಾಡಿದ್ದು, ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಬೀದರ್ ಜಿಲ್ಲೆಯ ಮೂರು ಲಕ್ಷ ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿರುವ ಬೀದರ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಹೋದರ ಅಮರ ಖಂಡ್ರೆ ಪ್ಯಾನೆಲ್ ಗೆದ್ದಿದೆ. ಅಧಿಕಾರ ಸ್ವೀಕರಿಸಿದ ನಂತರ ಬ್ಯಾಂಕ್‌ಗೆ ಬರಬೇಕಿದ್ದ ಎಲ್ಲ ಹಣವನ್ನು ವಸೂಲಿ ಮಾಡಿ, ಬ್ಯಾಂಕ್‌ನ್ನು ಪ್ರಗತಿಯತ್ತ ಕೊಂಡ್ಯೊಯ್ಯುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೀದರ್ ಜಿ¯್ಲÉಯಲ್ಲಿ ಕಾಂಗ್ರೆಸ್ ಪಕ್ಷದ ಪರ ವಾತಾವರಣವಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿಯಿಂದ ಕೇಂದ್ರದ ಒಡೆಯರಿಗೆ ಹೇಳಿಸಿ ರಾಜಕೀಯ ದುರುz್ದÉÃಶದಿಂದ ಬೀದರ್ ಡಿಸಿಸಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಕೇಂದ್ರ ಸರ್ಕಾರ ಯಾವುದೇ ದಾಳಿ ನಡೆಸಿದರೂ ನಾವು ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಮಾತನಾಡಿ, ಬೀದರ್ ಕ್ಷೇತ್ರದಿಂದ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಚುನಾವಣೆ ಮುನ್ನವೇ ಕಾಂಗ್ರೆಸ್‌ಗೆ ಕಪ್ಪು ಚುಕ್ಕೆ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಐವತ್ತು ವರ್ಷದಿಂದ ಇಂತಹ ದಾಳಿ ನಡೆದಿಲ್ಲ. ಐಟಿ ದಾಳಿಯಿಂದ ಕೇಂದ್ರ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ರಹೀಂಖಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣು ಮೋದಿ ಇತರರು ಇದ್ದರು.