ಕುರಿಗಾಹಿಗಳ ಹಿತ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಿ

bkt-16-2
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಮಾತನಾಡಿದರು. ಯಲ್ಲಪ್ಪ ಹೆಗಡೆ, ಬಸವರಾಜ ಧರ್ಮಂತಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ, ಈರಪ್ಪ ಹಂಚನಾಳ ಇದ್ದರು.
Published on

ಬಾಗಲಕೋಟೆ: ಕುರಿ ಗಾಹಿಗಳ ರಕ್ಷಣೆಗೆ ಸರ್ಕಾರ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟ ಗುಡ್ಡಗಳಲ್ಲಿ ಒಬ್ಬಂಟಿಯಾಗಿ ಹಗಲು ರಾತಿ ್ರಯೆನ್ನದೆ, ಚಳಿ, ಮಳೆ, ಬಿಸಿ ಲನ್ನು ಲೆಕ್ಕಿಸದೆ ತಮ್ಮ ಕಾಯಕದಲ್ಲಿ ಜೀವನ ನಡೆಸುತ್ತಿರುವ ಕುರಿಗಾಹಿಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದರು.

೨೦೨೪-೨೫ನೇ ಸಾಲಿನ ಬಜೆಟನಲ್ಲಿ ಕಾಯ್ದೆಯನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ತಿಳಿಸಿದ್ದರು. ಆದರೆ ಕುರಿಗಾಹಿಗಳ ರಕ್ಷಣೆ ಗಳಲ್ಲಿ ನುಡಿದಂತೆ ನಡೆದಿಲ್ಲ. ಶೀಘ್ರದಲ್ಲಿ ಕಾಯ್ದೆಯನ್ನು ಜಾರಿಗೆ ತರಬೇಕು ಇಲ್ಲದಿದ್ದರೇ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಮುಖಂಡ ಕಾಶಿನಾಥ ಹುಡೇದ ಮಾತನಾಡಿ, ೨೦೨೫ ಮಾರ್ಚ್ ೯ ರಂದು ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಇತನನ್ನು ಕುರಿಗಳ್ಳರು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಕುರಿಗಾಹಿಗಳ ಆತ್ಮ ರಕ್ಷಣೆಗೆ ಬಂದೂಕು ತರಬೇತಿ ನೀಡಬೇಕು ಅಂತ ಜಿಲ್ಲಾಽಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳಿಗೆ ಮನವಿ ಮಾಡಿಕೊಂಡಿದ್ದೇವು. ರಾಜ್ಯದಲ್ಲಿ ಪ್ರಥಮ ಬಾರಿಗೆ ಒಂದು ವಾರಗಳ ಕಾಲ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಲಾಯಿತು. ಅಂದಾಜು ೫೦೦ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಿದರು.

ಮುಖಂಡರಾದ ಯಲ್ಲಪ್ಪ ಹೆಗಡೆ, ಬಸವರಾಜ ಧರ್ಮಂತಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ, ಈರಪ್ಪ ಹಂಚನಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net