ಕುರುಹಿನಶೆಟ್ಟಿ ಮಹಿಳಾ ಸಂಘದ ವಾರ್ಷಿಕೋತ್ಸವ

9 ckm 14 pushpa rajendra
ಜಿಲ್ಲಾ ಕುರುಹಿನ ಶೆಟ್ಟಿ(ನೇಕಾರ) ಮಹಿಳಾ ಸಂಘದ ಅಧ್ಯಕ್ಷೆ ಸಿ.ಎಸ್.ಪುಷ್ಪಾ ರಾಜೇಂದ್ರ
Published on

ಚಿಕ್ಕಮಗಳೂರು: ಜಿಲ್ಲಾ ಕುರುಹಿನ ಶೆಟ್ಟಿ(ನೇಕಾರ) ಮಹಿಳಾ ಸಂಘದ ೮ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಜ. ೧೨ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. ೮೫ಕ್ಕೂ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಸಿ.ಎಸ್.ಪುಷ್ಪಾ ರಾಜೇಂದ್ರ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲಾ ಶ್ರೀನೀಲಕಂಠೇಶ್ವರ ಕುರುವಿನಶೆಟ್ಟಿ ಸಂಘದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಅಂದು ಬೆಳಗ್ಗೆ ೧೦.೩೦ಕ್ಕೆ ಆರಂಭವಾಗುವ ಕಾರ್ಯಕ್ರಮವು ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಕೇಶವ ಪ್ರಸಾದ್ ಉದ್ಘಾಟಿಸಲಿದ್ದಾರೆ. ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಪ್ರವಚನ ನಿಡಲಿದ್ದಾರೆ. ಶಾಸಕ ಎಚ್.ಡಿ.ತಮ್ಮಯ್ಯ, ವಿದಾನ ಪರಿಷತ್ ಸದಸ್ಯ ಸಿ.ಟಿ.ರವಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ಬೆಂಗಳೂರಿನ ಕೇಂದ್ರ ಕುರಹಿನ ಶೆಟ್ಟಿ ಸಂಘದ ಅಧ್ಯಕ್ಷ ಅಂಬಾದಾಸ್ ಕಾಮೂರ್ತಿ, ಉಪಾಧ್ಯಕ್ಷ ಜಿ.ಟಿ.ಸೋಮಶೇಖರ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಇತರರು ಭಾಗವಹಿಸಲಿದ್ದಾರೆ ಎಂದರು.

ಸAಘವು ವಿವಿಧ ಮಹಿಳಾ ಸಬಲೀಕರಣ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಸಂಬAಧ ಕಾರ್ಯಕ್ರಮಗಳು, ಟೈಲರಿಂಗ್ ತರಬೇತಿ ಇನ್ನಿತರೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಡ ವಿದ್ಯಾರ್ಥಿಯನ್ನು ದತ್ತು ಪಡೆದು ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷೆ ಚಂದ್ರಾವತಿ ಶಂಕರ್, ಉಪಾಧ್ಯಕ್ಷೆ ಪದ್ಮಾ ಮಹೇಶ್, ಕಾರ್ಯದರ್ಶಿ ತನುಜಾ ಶಿವಶಂಕರ್, ಸಹ ಕಾರ್ಯದರ್ಶಿ ಪ್ರತಿಮಾ ವೆಂಕಟೇಶ್, ಖಜಾಂಚಿ ಪ್ರಿಯಾ ಪರಮೇಶ್, ನಿರ್ದೇಶಕರುಗಳಾದ ಕವಿತಾ ಹಾಲಪ್ಪ, ದಾಕ್ಷಾಯಿಣಿ ಶ್ರೀನಿವಾಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net