ಕುರುಹಿನಶೆಟ್ಟಿ ಸಮಾಜದ ವಾರ್ಷಿಕ ಸಭೆ

ಸೋಮವಾರಪೇಟೆ ಶ್ರೀರಾಮ ಮಂದಿರದಲ್ಲಿ ನಡೆದ ಕುರುಹಿನ ಶೆಟ್ಟಿ ಸಮಾಜದ ವಾರ್ಷಿಕ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.
03SPT9.
Published on

ಸೋಮವಾರಪೇಟೆ: ಕುರುಹಿನಶೆಟ್ಟಿ ಸಮಾಜದ ವಾರ್ಷಿಕ ಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ಪಟ್ಟಣದ ಶ್ರೀ ರಾಮಮಂದಿರ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಬಿ.ಸಿ.ವೆಂಕಟೇಶ್ ಮಾತನಾಡಿ, ಎಲ್ಲ ಸದಸ್ಯರು ಕೈ ಜೋಡಿಸಿದಾಗ ಮಾತ್ರ ಸಂಘದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.


ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಂಜುನಾಥ್ ಮಾತನಾಡಿ, ಎಲ್ಲರೂ ಉತ್ತಮ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರಬೇಕೆಂದು ಆಶಯವನ್ನಿಟ್ಟುಕೊಂಡು ಸಂಘದ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಪ್ರೋತ್ಸಾಹಧನ ವಿತರಿಸಲಾಗುತ್ತದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.


ವೇದಿಕೆಯಲ್ಲಿ ಉಪಾಧ್ಯಕ್ಷ ರಾಮ್ ಪ್ರಸಾದ್, ಖಜಾಂಚಿ ಬಿ.ಎಂ.ಶ್ರೀಧರ್, ಸೀತಾ ಬಳಗದ ಅಧ್ಯಕ್ಷೆ ಯಶೋದಾ, ಯುವಕ ಸಂಘದ ಅಧ್ಯಕ್ಷ ಬಿ.ಜಿ.ರವಿ, ಬಿ.ಡಿ. ಮಂಜುನಾಥ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net