ಕುರ್ಚಿಯೋಗ ಹಿರಿಯ ನಾಗರಿಕರಿಗೆ ವರದಾನ

Chair yoga is a boon for senior citizens
Chair yoga is a boon for senior citizens
Published on

ಜಮಖಂಡಿ: ದೇಹದ ಮಣಿದಾಡುವಿಕೆ ಮತ್ತು ಸಮಗ್ರ ಆರೋಗ್ಯ ಕಾಪಾಡಿಕೊಳ್ಳಲು ಕುರ್ಚಿಯೋಗ ಹಿರಿಯ ನಾಗರಿಕರಿಗೆ ವರದಾನವಾಗಿದೆ ಎಂದು ಯೋಗಮಾತೆ ಡಾ. ಪ್ರೀತಿ ನ್ಯಾಮಗೌಡ ಹೇಳಿದರು.

ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಮತ್ತು ದಾನೇಶ್ವರಿ ಮಹಿಳಾ ಮಂಡಳದ ಆಶ್ರಯದಲ್ಲಿ ಹಿರಿಯ ನಾಗರಿಕರಿಗಾಗಿ ಮಂಗಳವಾರ ಆಯೋಜಿಸಿದ್ದ ವಿಶ್ವಯೋಗ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮದಲ್ಲಿ ಕುರ್ಚಿಯೋಗ ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ರಜಪೂತ ಮಾತನಾಡಿದರು. ದಾನೇಶ್ವರಿ ಮಹಿಳಾ ಮಂಡಳದ ಅಧ್ಯಕ್ಷೆ ನಂದಿನಿ ಬಾಂಗಿ ಕಾರ್ಯಕ್ರಮ ಉದ್ಘಾಟಿಸಿದರು. ಎಲ್.ವಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಠ್ಠಲ ಪರೀಟ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಆಸ್ಪತ್ರೆಯ ಸಿಬ್ಬಂದಿಯ ಸಹಯೋಗದಲ್ಲಿ ಸಸಿ ನೆಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net