

ಬಿಡದಿ: ದೇಶದಲ್ಲಿ ಕೌಶಲಪೂರ್ಣ ಯುವಶಕ್ತಿ ನಿರ್ಮಿಸಿ, ಸದೃಢಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂೆಯಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ ತಿಳಿಸಿದರು.
ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಭಾನುವಾರ ಪ್ರಮಾಣಪತ್ರ ವಿತರಿಸಿ, ಎರಡನೇ ಹಂತದ ತರಬೇತಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಟೊಯೋಟಾ ಸಂಸ್ಥೆ ಕಾರು ಉತ್ಪಾದನೆಗೆ ಒತ್ತು ಕೊಡದೆ, ಗ್ರಾಮೀಣ ಭಾಗದ ಯುವಕರಿಗೆ ಆಟೋಮೊಬೈಲ್ ೇತ್ರದ ಬಗ್ಗೆ ತರಬೇತಿ ನೀಡುತ್ತಿದೆ. ಇದೊಂದು ಮಹತ್ವಪೂರ್ಣ ಕೆಲಸವಾಗಿದೆ. ಈ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿದ್ದೇನೆ. ಅವರ ಭವಿಷ್ಯಕ್ಕೆ ಅಡಿಗಲ್ಲು ಹಾಕಿಕೊಡುತ್ತಿರುವುದು ಸಂತಸದ ವಿಷಯ ಎಂದರು.
ಸ್ವಾಂತ್ರ$್ಯದ ಅಮೃತ ಮಹೋತ್ಸವದ ವರ್ಷದಲ್ಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಹಲವು ಸುಧಾರಿತ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ. ಆತ್ಮನಿರ್ಭರ ಯೋಜನೆ, ಬೇಟಿ ಡಾವೋ, ಬೇಟಿ ಬಚಾವೋ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಮಾತನಾಡಿ, ಟೊಯೋಟಾ ಕಂಪನಿಯ ತಾಂತ್ರಿಕ ತರಬೇತಿ ಸಂಸ್ಥೆಯು 200 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಕಾರ್ಯಾರಂಭಿಸಿ, ಇಂದು 1,200 ಯವಕರಿಗೆ ತರಬೇತಿ ನೀಡುವ ಮಟ್ಟಿಗೆ ಬೆಳೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಸ್ಥೆಯಲ್ಲಿ ತರಬೇತಿ ಪಡೆದವರು ಯಾವುದೇ ಆಟೋಮೊಬೈಲ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಳ್ಳಬಹುದಾಗಿದೆ. ಗುಣಮಟ್ಟದ ವ್ಯಕ್ತಿಯನ್ನು ಸಮಾಜಕ್ಕೆ ನೀಡುವ ಮುಖೇನ ಶಿಸ್ತು, ಸಹ ಕಲಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಡದಿ-ಹಾರೋಹಳ್ಳಿ ಟೌನ್ಶಿಪ್: ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿವೆ. ಈ ನಿಟ್ಟಿನಲ್ಲಿ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶವನ್ನು ಟೌನ್ಶಿಪ್ ಆಗಿ ಪರಿವರ್ತಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಅಶ್ವತ್ಥನಾರಾಯಣ್ ಹೇಳಿದರು. ವಿಶ್ವಮಟ್ಟದಲ್ಲಿ ರಾಜ್ಯ ಪ್ರಗತಿ ಕಾಣಬೇಕಾದರೆ ಸರ್ಕಾರದ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರ್ಕಾರ ಬದ್ಧ ಎಂದರು.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಮಾತನಾಡಿ, ಕಂಪನಿಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡಲು ಸ್ಥಳಿಯ ಉತ್ಪಾದನಾ ಕೇಂದ್ರ ರಚಿಸಿ ದೊಡ್ಡ ಪ್ರಮಾಣದ ಹೂಡಿಕೆಯನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಶಾಸಕ ಎ.ಮಂಜುನಾಥ್, ಟಯೋಟಾ ಆಟೋ ಪಾರ್ಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನೆನ್ ರಾಜೇಂದ್ರನ್ ಮತ್ತಿತರರಿದ್ದರು.