ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

16Kush01
Published on

ಕುಶಾಲನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿಜೆಪಿ ನಾಯಕರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.


ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಮಹಾನ್ ನಾಯಕರನ್ನು ಬಿಜೆಪಿ ಅಪಮಾನ ಮಾಡಿದೆ. ಇಷ್ಟಾದರೂ ಆ ಪಕ್ಷದ ಮುಖಂಡರು ಕ್ಷಮೆ ಕೇಳುತ್ತಿಲ್ಲ. ಈ ನಿಟ್ಟಿನಲ್ಲಿ ದಲಿತರ ಮನೆ ಮನೆಗೆ ತೆರಳಿ ಬಿಜೆಪಿಯ ಮನಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.


ಮುಖಂಡರಾದ ವಿ.ಪಿ.ಶಶಿಧರ್, ಪ್ರಮೋದ್ ಮುತ್ತಪ್ಪ, ಮಂಜುನಾಥ್ ಗುಂಡೂರಾವ್, ಅಬ್ದುಲ್ ಖಾದರ್, ಅಣ್ಣಯ್ಯ, ಮುಳ್ಳುಸೋಗೆ ಹರೀಶ್, ಮುಸ್ತಾಪ, ಗೊಂದಿಬಸವನಹಳ್ಳಿ ಪ್ರಕಾಶ್, ನವೀನ್, ಶಾಂತಪ್ಪ, ಆಟೋ ಚಂದ್ರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net