ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

29Kush01
ಬಿಜೆಪಿ ಸರ್ಕಾರದ ಧೋರಣೆ ವಿರುದ್ಧ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ವಿ.ಪಿ.ಶಶಿಧರ್, ಗೊಂದಿಬಸವನಹಳ್ಳಿ ಪ್ರಕಾಶ್, ಸಿದ್ದಾಪುರ ಸಾಜಿ, ರಮೇಶ್ ಇತರರು ಇದ್ದರು.
Published on

ಕುಶಾಲನಗರ: ಕೇಂದ್ರ ಸರ್ಕಾರ ದ್ವೇಷದ ರಾಜಕಾರಣದಲ್ಲಿ ತೊಡಗಿ ರಾಹುಲ್ ಗಾಂಧಿ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೈಚನಹಳ್ಳಿಯ ಮಾರಿಯಮ್ಮ ದೇವಾಲಯ ಬಳಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಹುಲ್ ಗಾಂಧಿ ಪರ ಜೈಕಾರ ಮೊಳಗಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಾಂಗ್ರೆಸ್ ದೇಶದ ಭಾವೈಕ್ಯತೆಯ ಸಂಕೇತ. ದೇಶವನ್ನು ಕಟ್ಟಿ ಬೆಳೆಸಿದ ಕೀರ್ತಿ, ಪರಂಪರೆ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಒಡೆದು ಆಳುವ ಬ್ರಿಟಿಷರ ನೀತಿಯನ್ನು ಮೈಗೂಡಿಸಿಕೊಂಡಿರುವ ಬಿಜೆಪಿ ಜಾತಿ, ಧರ್ಮ, ಭಾಷೆಯ ವಿಚಾರದಲ್ಲಿ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನದಲ್ಲಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯ ಯಶಸ್ಸಿನಿಂದ ಕಂಗಾಲಾದ ಬಿಜೆಪಿ ಹೇಗಾದರೂ ಮಾಡಿ ರಾಹುಲ್ ಗಾಂಧಿಯನ್ನು ಹಣಿಯಲು ತಂತ್ರ ರೂಪಿಸಿ ಪ್ರಕರಣ ದಾಖಲಿಸಿರುವುದು ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖರಾದ ಟಿ.ಪಿ.ಹಮೀದ್, ಸುಂದರೇಶ್, ಶೇಖ್ ಖಲೀಮುಲ್ಲಾ, ಶಿವಶಂಕರ್, ಬಿ.ಡಿ.ಅಣ್ಣಯ್ಯ, ಅಬ್ದುಲ್ ರಜಾಕ್, ಅಬ್ದುಲ್ ಖಾದರ್, ರಾಜೇಂದ್ರ, ಶಾಜಿ, ರಮೇಶ್, ನವೀನ್, ದೇವು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net