ಕುಶಾಲನಗರದಲ್ಲಿ ಕೆಂಪೇಗೌಡ ಜಯಂತ್ಯುತ್ಸವ

28mdk05
Published on

ಕುಶಾಲನಗರ: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಶುಕ್ರವಾರ ನಾಡಪ್ರಭು ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಆಚರಿಸಲಾಯಿತು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸಮುದಾಯ ಬಾಂಧವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೆಂಪೇಗೌಡರ ಕೊಡುಗೆಗಳ ಕುರಿತು ಎಂ.ಕೆ.ದಿನೇಶ್ ಮಾತನಾಡಿದರು.

ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಎಂ.ಎಂ.ಪ್ರಕಾಶ್, ಖಜಾಂಚಿ ಅರುಣ್ ಚಂಗಪ್ಪ, ನಿರ್ದೇಶಕರಾದ ವಿ.ಜೆ. ನವೀನ್ ಗೌಡ, ಗೌತಮ್, ಗಿರೀಶ್, ಭಾನುಪ್ರಕಾಶ್, ಎಂ.ಡಿ.ಕೃಷ್ಣಪ್ಪ, ಜಿ.ಬಿ.ಜಗದೀಶ್, ಗಿರೀಶ್, ಗಾಯತ್ರಿ, ರಮೇಶ್, ಸಹಕಾರ ಸಂಘದ ನಿರ್ದೇಶಕಿ ರೇಖಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net