ಕುಶಾಲನಗರದಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಸಭೆ

01Kush02
Published on

ಕುಶಾಲನಗರ: ಕುಶಾಲನಗರ ಮತ್ತು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ಇತ್ತೀಚೆಗೆ ಕುಶಾಲನಗರದಲ್ಲಿ ನಡೆಯಿತು.

ಪಟ್ಟಣದ ಗೌಡ ಸಮಾಜದಲ್ಲಿ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಅಧಿಕಾರಿ ವರ್ಗಕ್ಕೆ ಮಾಹಿತಿ ನೀಡಲಾಯಿತು.
ಡಿವೈಎಸ್ಪಿ ಗಂಗಾಧರಪ್ಪ ಅವರು ಪೊಲೀಸರ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ತಿಳಿಸಿಕೊಟ್ಟರು. ಠಾಣಾ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ಕುಶಾಲನಗರ ಪಟ್ಟಣ, ಗ್ರಾಮಾಂತರ, ಸಂಚಾರ, ಅಪರಾಧ ಮತ್ತು ಸುಂಟಿಕೊಪ್ಪ ವಿಭಾಗದ ಠಾಣಾಧಿಕಾರಿಗಳು, ಉಪಠಾಣಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net