

ತುಮಕೂರು: ರಾಷ್ಟ್ರೀಯ ಕುಷ್ಟರೋಗ ನಿಮೂರ್ಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಆಂದೋಲನ ಜಿಲ್ಲೆಯಾದ್ಯಂತ ನವೆಂಬರ್ 3 ರಿಂದ 19ರವರೆಗೆ ಹಮ್ಮಿಕೊಳಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿಮೂರ್ಲನಾಧಿಕಾರಿ ಡಾ.ಕೆ.ರವೀಂದ್ರ ನಾಯಕ್ ತಿಳಿಸಿದ್ದಾರೆ.
ನಿಯಮಿತ ಚಿಕಿತ್ಸೆ ಪಡೆದರೆ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದ್ದು, ಆರೋಗ್ಯ ಇಲಾಖೆಯಿಂದ ಮನೆ-ಮನೆ ಭೇಟಿ ಮಾಡಿ, ಚರ್ಮ ಮತ್ತು ನರಗಳ ತಪಾಸಣೆ ನಡೆಸಲಾಗುತ್ತದೆ. ಕುಷ್ಠರೋಗ ದೃಢಪಟ್ಟ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಸಕಾಲಕ್ಕೆ ಚಿಕಿತ್ಸೆ ಪಡೆಯುವುದರಿಂದ ಅಂಗವಿಕಲತೆ ತಡೆಗಟ್ಟಬಹುದು.