

ಚಿಕ್ಕಮಗಳೂರು: ಮತಗಳ್ಳತನದ ಮೂಲಕ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿರುವ ಎನ್‌ಡಿಎ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಸಂಜೆ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್, ಕೇಂದ್ರ ಸರ್ಕಾರ ಮತಗಳ್ಳತನದ ಮೂಲಕ ಅಧಿಕಾರ ಹಿಡಿದಿರುವುದು ಇದೀಗ ಸಾಬೀತಾಗುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನವನ್ನು ಬಹಿರಂಗಪಡಿಸಿದ ಬಳಿಕ ಒಂದೊAದೇ ಮತಗಳ್ಳತನ ಪ್ರಕರಣಗಳು ಬಯಲಿಗೆ ಬರುತ್ತಿವೆ ಎಂದು ಅರೋಪಿಸಿದರು.
ಚುನಾವಣಾ ಆಯೋಗದ ಆಯುಕ್ತರ ನೇಮಕದ ನಿಯಮಗಳನ್ನು ಬದಲಿಸುವ ಮೂಲಕ ಮತಗಳ್ಳತನವನ್ನು ಬಿಜೆಪಿ ಆರಂಭಿಸಿದೆ. ಮಹಾದೇವಪುರ ಕ್ಷೇತ್ರ ಒಂದರಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಕಳ್ಳತನ ಮಾಡಲಾಗಿದೆ. ಇನ್ನು ಬಿಹಾರದಲ್ಲಿ ಕಾಂಗ್ರೆಸ್ ಮತಗಳ್ಳತನದ ಆರೋಪ ಮಾಡಿದ ಬಳಿಕ ೬೦ ಲಕ್ಷಕ್ಕೂ ಅಧಿಕ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇನ್ನೂ ವಿಶೇಷ ಎಂದರೆ ತಮಗೆ ಬೇಕಾದ ಕಡೆ ಮತದಾರರನ್ನು ಸೇರ್ಪಡೆಗೊಳಿಸಲಾಗಿದೆ. ಇನ್ನು ಕೆಲವೆಡೆ ಬದುಕಿದ್ದವರನ್ನು ಮೃತಪಟ್ಟಿದ್ದಾರೆ ಎಂದು ಹೇಳಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದರೆ ಚುನಾವಣಾ ಆಯೋಗದ ಆಯುಕ್ತರು ಅದಕ್ಕೆ ಉತ್ತರ ನೀಡಬೇಕಾಗಿತ್ತು. ಆದರೆ ಬಿಜೆಪಿ ನಾಯಕರು ಉತ್ತರ ನೀಡುತ್ತಿದ್ದಾರೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ತಮ್ಮ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಬಿಜೆಪಿ ಮತಗಳ್ಳತನ ನಡೆಸಿರುವುದು ಸಾಬೀತಾದಂತಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಂಶುಮAತ್ ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಆತಂಕ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಡೆಯಿದೆ. ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಸಂವಿಧಾನವನ್ನು ಉಳಿಸಿ ಎಂದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿರುವುದು ದುರಂತದ ಸಂಗತಿ ಎಂದರು.
ಬಿಜೆಪಿಯವರು ದೇಶಭಕ್ತಿ ಬಗ್ಗೆ ದೊಡ್ಡದಾಗಿ ಭಾಷಣ ಮಾಡುತ್ತಾರೆ. ಆದರೆ ಸಂಘ ಪರಿವಾರದವರು ದೇಶಕ್ಕೆ ಸ್ವಾತಂತ್ರÈ ಬಂದು ಐವತ್ತು ವರ್ಷವಾದರೂ ತನ್ನ ಕಚೇರಿ ಮೇಲೆ ರಾಷ್ಟ್ರ ಧ್ಜಜ ಹಾರಿಸಿರಲಿಲ್ಲ. ಇದನ್ನು ನಾವೆಲ್ಲರೂ ಪ್ರಶ್ನಿಸಬೇಕಾಗಿದೆ. ಹಿಂದಿನಿAದಲೂ ಬಿಜೆಪಿ ಹಿಂಬಾಗಿಲಿನಿAದ ಅಧಿಕಾರ ಪಡೆಯುವ ಕೆಲಸ ಮಾಡುತ್ತಿದೆ. ಹಿಂದೆ ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ಇದೀಗ ಮತಗಳ್ಳತನದ ಮೂಲಕ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ ಎಂದು ಆಪಾದಿಸಿದರು.
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದರು. ಸಿಬಿಐ, ಇಡಿ ಹೀಗೆ ಹಲವು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದರು. ಇದೀಗ ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಂಡಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯ ಡಿಜಿಟಲ್ ಪ್ರತಿ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಮತದಾರರ ಪಟ್ಟಿಯ ಡಿಜಿಟಲ್ ಪ್ರತಿ ನೀಡಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಜನರ ಹಕ್ಕು ಉಳಿಸಲು ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ಡಿ.ಎಲ್.ವಿಜಯಕುಮಾರ್, ಎಂ.ಎಲ್.ಮೂರ್ತಿ, ರೇಖಾ ಹುಲಿಯಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಪ್ರಮುಖರಾದ ಬೆಟಗೆರೆ ಪ್ರವೀಣ್ ಮತ್ತಿತರರಿದ್ದರು.