ಕೂಡಲೇ ಚುಚ್ಚುಮದ್ದು ಪಡೆಯಿರಿ

08 YERRISWAMY 05
Published on

ಬಳ್ಳಾರಿ : ನಾಯಿ ಕಡಿತ ಸೇರಿದಂತೆ ಯಾವುದೇ ಪ್ರಾಣಿ ಕಡಿತ ಉಂಟಾದಲ್ಲಿ ಕೂಡಲೇ ರೇಬೀಸ್ ಚುಚ್ಚುಮದ್ದು ಪಡೆಯಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.
ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಸಹಯೋಗದೊಂದಿಗೆ ನಡೆದ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಕಿದ ಅಥವಾ ಬೀದಿ ನಾಯಿಗಳು ಮತ್ಯಾವುದೇ ಪ್ರಾಣಿ ಕಡಿತ ಉಂಟಾದ ಸಂದರ್ಭದಲ್ಲಿ ಸೋಪಿನ ಮೂಲಕ ನೀರಿನಿಂದ ಗಾಯ ಸ್ಥಳ ತೊಳೆದು ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ರೇಬಿಸ್ ಚುಚ್ಚುಮದ್ದು ಪಡೆಯುವ ಮೂಲಕ ಸಂಭಾವ್ಯ ರೇಬಿಸ್ ಖಾಯಿಲೆಯನ್ನು ಬಾರದಂತೆ ತಡೆಯಬಹುದಾಗಿದೆ. ಆರೋಗ್ಯ ಇಲಾಖೆ, ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆ, ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ನಗರಾಭಿವೃದ್ದಿ ಕೋಶ ಮತ್ತು ಇತರೆ ಇಲಾಖೆಗಳ ಸಹಭಾಗಿತ್ವದೊಂದಿಗೆ ಪ್ರಾಣಿಗಳ ಕಡಿತದಿಂದ ಹರಡುವ ವೈರಸ್ ಮೂಲಕ ಮನುಷ್ಯನ ದೇಹಕ್ಕೆ ರೋಗ ಹರಡುವುದನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net