ಕೂಲಿ ಕಾರ್ಮಿಕರಿಗೆ ಹೊದಿಕೆ ವಿತರಣೆ

IMG-20241202-WA0039
Published on

ಚಾಮರಾಜನಗರ :ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ವತಿಯಿಂದ ಕೂಲಿ ಕಾರ್ಮಿಕರಿಗೆ ಹೊದಿಕೆ, ಮಕ್ಕಳ ಆಟಿಕೆ ವಸ್ತುಗಳು, ಹಾಗೂ ತಿಂಡಿ ತಿನಿಸು ವಿತರಿಸಲಾಯಿತು.

ನಗರದ ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿರುವ ಚಿತ್ರದುರ್ಗ ಜಿಲ್ಲೆಯ ಪೈಪ್ ಲೈನ್ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಎಚ್.ಎಂ.ಶಿವಣ್ಣ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಿಂದ ಕುಟುಂಬ ಸಮೇತರಾಗಿ ಬಂದು ಇಲ್ಲಿ ಪೈಪ್ ಲೈನ್ ಕೆಲಸ ಮಾಡುತ್ತಿರುವುದು ತುಂಬಾ ಸಂತೋಷ. ಇದೇ ರೀತಿ ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಇನ್ನೂ ಹೆಚ್ಚಿನ ಸಹಾಯ ಮಾಡಲಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ, ಚಂದಕವಾಡಿ ಡಿ.ರಾಜಣ್ಣ, ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಅಧ್ಯಕ್ಷ ಪ್ರಕಾಶ್ ಬೆಲ್ಲದ್, ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿಯಸ್ ಮಾಲೀಕ ಆಲೂರು ದೊರೆರಾಜ್, ಚಂದಕವಾಡಿ ನಾಗಮಹದೇವ್, ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಂ.ನಾಗರಾಜು, ಅಮಚವಾಡಿ ಪ್ರಕಾಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net