ಕೂಳೂರು ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

IMG_20211023_103852
Published on

ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net