

ಮಂಗಳೂರು: ಕೂಳೂರು ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಬೆಳಗ್ಗೆಯಿಂದ ವಾಹನ ದಟ್ಟಣೆ ಉಂಟಾಗಿದೆ.
ಪಣಂಬೂರು ಕಡೆಯಿಂದ ಮಂಗಳೂರು ಕಡೆಗೆ ಬರುವ ರಸ್ತೆಯಲ್ಲಿ ಕೂಳೂರು ಸೇತುವೆ ಬಳಿ ನಿಧಾನವಾಗಿ ವಾಹನ ಸಂಚರಿಸುವುದರಿಂದ ಸರತಿ ಸಾಲಿನಲ್ಲಿ ವಾಹನಗಳು ಸಾಗುತ್ತಿವೆ. ಭಾನುವಾರ ಸಂಜೆಯ ತನಕ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.