ಸೋಮವಾರಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕವಯತ್ರಿ ಜಲಜಾ ಶೇಖರ್ ಅವರ ನೆಲ ಮುಗಿಲು ಕವನ ಸಂಕಲನದ ಬಿಡುಗಡೆ ಸಮಾರಂಭ ಜು.30 ರಂದು ಬೆಳಗ್ಗೆ 10.30 ಗಂಟೆಗೆ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಲಿದೆ.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಸಾಹಿತಿ, ಜಾನಪದ ವಿದ್ವಾಂಸ ಡಾ.ಬೆಸೂರು ಮೋಹನ್ ಪಾಳೇಗಾರ್ ಕೃತಿ ಕುರಿತು ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಅಧ್ಯಕ್ಷ ಜೆ.ಸಿ.ಶೇಖರ್, ಕವಯತ್ರಿ ಜಲಜಾ ಶೇಖರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.