ಕೃಷಿ ಆಧರಿತ ಕೈಗಾರಿಕೆ ಸ್ಥಾಪಿಸಿ

rait sang
Published on

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಕೈಗಾರಿಕೆ ಸ್ಥಾಪಿಸುವ ಮೂಲಕ ದುಡಿಯುವ ಕೈಗಳಿಗೆ ಉದ್ಯೋಗ ಕೊಡಬೇಕು ಎಂದು ಜಿಲ್ಲಾ ರೈತ ಸಂಘ (ಪುಟ್ಟಣ್ಣಯ್ಯ ಬಣ) ಆಗ್ರಹಿಸಿದೆ.

ಜನ ಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಬೀದರ್ ಗಡಿಯಲ್ಲಿದೆ. ಇಲ್ಲಿನ ಜನರಿಗೆ ಕೆಲಸವಿಲ್ಲದ ಕಾರಣ ನೆರೆಯ ತೆಲಂಗಾಣ, ಮಹಾರಾಷ್ಟ್ರ ಇತರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯರಿಗೆ ಕೆಲಸ ನೀಡಲು ಕೈಗಾರಿಕೆ ಸ್ಥಾಪಿಸುವ ಅಗತ್ಯವಿದೆ ಎಂದು ಗಮನ ಸೆಳೆದಿದ್ದಾರೆ.

ಜಿಲ್ಲೆಯು ಕೃಷಿಗೆ ಪೂರಕವಾದ ವಾತಾವರಣ ಹೊಂದಿದೆ. ಇಲ್ಲಿಯ ಭೂಮಿ ಎಲ್ಲ ತರಹದ ಬೆಳೆಗೆ ಅತ್ಯಂತ ಫಲವತ್ತಾಗಿದೆ. ಕೃಷಿ, ತೋಟಗಾರಿಕೆಗೆ ಪೂರಕ ವಾತಾವರಣವಿದ್ದರೂ ಇದಕ್ಕೆ ಸಂಬಂಧಿಸಿದ ಉದ್ಯಮಗಳಿಲ್ಲ. ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರದ ಆತ್ಮನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ ಕೃಷಿ ಆಧರಿತ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಭಾಲ್ಕಿ ತಾಲೂಕಾಧ್ಯಕ್ಷ ಸಂತೋಷ ಬಿಜಿ ಪಾಟೀಲ್, ಪ್ರಮುಖರಾದ ನಾಗಶೆಟ್ಟೆಪ್ಪ ಲಂಜವಾಡೆ, ವಿಠಲರೆಡ್ಡಿ ಆಣದೂರ, ವಿಜಯಕುಮಾರ ಕಾರಬಾರಿ, ಬಸವರಾಜ ಅಷ್ಟೂರ್, ಶಾಂತಮ್ಮ ಹಜನಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net