ಕೃಷಿ ಇಲಾಖೆ ಖಾಲಿ ಹುದ್ದೆಗಳ ಭರ್ತಿ; ವಿಧಾನಸಭೆಗೆ ಮಾಹಿತಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

bc patil
Published on

ಕೃಷಿ ಇಲಾಖೆಯ ಗ್ರೂಪ್ ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೆಪಿಎಸ್​ಸಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ.

ಜೆಡಿಎಸ್​ನ ಎಚ್.ಡಿ.ರೇವಣ್ಣ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

2018-19ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net