ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳ ವಿತರಣೆಗೆ ಅರ್ಜಿ ಆಹ್ವಾನ

application
Published on

ಹಾಸನ: ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಉತ್ಪನ್ನಗಳ ಸಂಸ್ಕರಣಾ ಯೋಜನೆಯಡಿ ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದರು.

ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳಾದ ದಾಲ್ ಪ್ರೊಸೆಸರ್, ಫ್ಲೋರ್ ಮಿಲ್, ಮಿನಿ ರೈಸ್ ಮಿಲ್, ಮಿನಿ ಆಯಿಲ್ ಎಕ್ಸಪೆಲ್ಲರ್, ರಾಗಿ ಕ್ಲೀನಿಂಗ್ ಮಿಷಿನ್, ಶುಗರ್ ಕೇನ್ ಕ್ರಷಿಂಗ್ ಯುನಿಟ್, ಪಲ್ವರೈಸರ್, ರವಾ/ಕ್ಯಾಟಲ್ ಫೀಡ್ ಮಿಷಿನ್, ಚಿಲ್ಲಿ ಪೌಡಿಂಗ್ ಮಷಿನ್, ಶಾವಿಗೆ ಮಷಿನ್, ಶುಗರ್ ಕೇನ್ ಜ್ಯೂಸ್ ಮೇಕಿಂಗ್ ಮಷಿನ್, ಹಾಗು ಇನ್ನಿತರೆ ಕೃಷಿ ಸಂಸ್ಕರಣಾ ಘಟಕಗಳು ಲಭ್ಯವಿರುತ್ತದೆ. ಸಾಮಾನ್ಯ ರೈತರಿಗೆ ಶೇ.50ರಷ್ಟು, ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನ ಸಿಗಲಿದೆ. ಘಟಕಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ರೈತರು ಫೋಟೋ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಹಣಿ, 20 ರೂಪಾಯಿಯ ಛಾಪಾ ಕಾಗದ, ಕೆಇಬಿಯಿಂದ ವಿದ್ಯುಚ್ಛಕ್ತಿ ಪ್ರಮಾಣಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net