ಕೃಷಿ ಕ್ಷೇತ್ರಕ್ಕೆ ಸಿಗಲಿ ಮನ್ನಣೆ, ಪರಿಸರವಾದಿ ಸುರೇಶ್ ಹೆಬ್ಳೀಕರ್ ಸಲಹೆ, ಉದ್ಯೋಗಕ್ಕಾಗಿ ಪಟ್ಟಣಗಳಿಗೆ ವಲಸೆ ಬೇಡ

D 25 CPTN 1
Published on

ಚನ್ನರಾಯಪಟ್ಟಣ: ಯುವ ಜನತೆ ಕೃಷಿ ಕ್ಷೇತ್ರಕ್ಕೂ ಆದ್ಯತೆ ನೀಡಬೇಕು. ಇಲ್ಲವಾದರೆ ಮುಂದೆ ಸಾಕಷ್ಟು ಸಮಸ್ಯೆ ಎದುರಾಗಲಿವೆ ಎಂದು ಪರಿಸರವಾದಿ ಸುರೇಶ್ ಹೆಬ್ಳೀಕರ್ ಎಚ್ಚರಿಕೆ ನೀಡಿದರು.

ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಹೂವಿನಾಯಕನಹಳ್ಳಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ರೈತ ಸಂಪರ್ಕ ಕೇಂದ್ರದ ಸಾಮಾನ್ಯ ಸಭೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತೊಗರಿ ಬೇಳೆ ಪದ್ಧತಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವಕರು ಉದ್ಯೋಗ ಅರಸಿ ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ಕೃಷಿ ಕುಂಠಿತವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಕಲುಷಿತವಾಗುತ್ತಿದ್ದು, ಉತ್ತಮ ಪರಿಸರ ಹಾಗೂ ಆರೋಗ್ಯಕ್ಕೆ ಕೃಷಿಗೆ ಒತ್ತು ನೀಡಬೇಕಿದೆ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ವಿನೋದಮ್ಮ ಮಾತನಾಡಿ, ಸಾವಯವ ಕೃಷಿಗೆ ಹೆಚ್ಚು ಆದ್ಯತೆ ನೀಡಬೇಕು. ಎರೆಹುಳು ತೊಟ್ಟಿ ನಿರ್ಮಾಣ ಹಾಗೂ ಕೃಷಿ ಹೊಂಡ ನಿರ್ಮಾಣಕ್ಕೆ ನರೇಗಾದಲ್ಲಿ ಆರ್ಥಿಕ ನೆರವು ದೊರಕಲಿದೆ ಎಂದರು.

ಕೃಷಿ ಇಲಾಖೆ ಸಹಾಯಕ ಅಧಿಕಾರಿ ಎಚ್.ಎನ್. ರುದ್ರಸ್ವಾಮಿ ಮಾತನಾಡಿ, ಹೂವಿನಾಯಕನಹಳ್ಳಿ, ಬಾಗಲೂರು ಸೇರಿ ಹಲವು ಗ್ರಾಮಗಳಲ್ಲಿ ಎರೆಹುಳು ತೊಟ್ಟಿ ನಿರ್ಮಾಣವಾಗುತ್ತಿದ್ದು, ಸಾವಯವ ಕೃಷಿಗೆ ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net