ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

1111111111111
Published on

ಧಾರವಾಡ: ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ ೨೦೨೨- ೨೩ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆ ಸ್ಪರ್ಧೆ ಏರ್ಪಡಿಸಲಾಗಿದೆ. ಮಹಿಳೆಯರೂ ಅರ್ಜಿ ಸಲ್ಲಿಸಬಹುದು.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಅರ್ಜಿಯನ್ನು ಆಯಾ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಕ್ಕೆ ಡಿ. ೨೦ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು.
ರಾಜ್ಯ ಮಟ್ಟದ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಜೋಳ, ಕಡಲೆ, ಜಿಲ್ಲಾ ಮಟ್ಟಕ್ಕೆ ಕಡಲೆ ಬೆಳೆ ನಿಗದಿಪಡಿಸಲಾಗಿದೆ. ತಾಲೂಕು ಮಟ್ಟದ ಸ್ಪರ್ಧೆಗೆ ಧಾರವಾಡ, ಹುಬ್ಬಳ್ಳಿ, ಕುಂದಗೋಳ, ನವಲಗುಂದ ತಾಲೂಕುಗಳಿಗೆ ಕಡಲೆ, ಕಲಘಟಗಿ ತಾಲೂಕಿಗೆ ಜೋಳ (ಎಲ್ಲವೂ ಮಳೆಯಾಶ್ರಿತ) ಬೆಳೆ ನಿಗದಿಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಬಿಜಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net