ಕೃಷಿ ವಿಜ್ಞಾನ ಕೇಂದ್ರದ ಲಾಭ ಪಡೆದುಕೊಳ್ಳಿ

17Manju9
ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಬಿ.ಆರ್.ಪಾಟೀಲ ಉದ್ಘಾಟಿಸಿದರು. ಡಾ.ವಿ.ಐ.ಪಾಟೀಲ, ಶ್ರೀದೇವಿ ಅಂಗಡಿ, ಎಸ್.ಎಂ.ವಾರದ, ಡಾ.ಎಸ್.ಎಸ್.ಹಿರೇಮಠ ಇದ್ದರು.
Published on

ಬೆಳಗಾವಿ: ರೈತರ ಅನುಕೂಲಕ್ಕಾಗಿ ಕೃಷಿ ವಿಜ್ಞಾನ ಕೇಂದ್ರವನ್ನು ತೆರೆಯಲಾಗಿದ್ದು, ರೈತರು ಈ ಕೇಂದ್ರದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಬಿ.ಆರ್.ಪಾಟೀಲ ಹೇಳಿದರು.

ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಧಾನಮಂತ್ರಿ ರೈತ ಸಮ್ಮಾನ್ ಸಮ್ಮೇಳನ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಪರಿಶ್ರಮದಿಂದ ಕೃಷಿ ವಿಜ್ಞಾನ ಕೇಂದ್ರ ಆರಂಭಿಸಲಾಗಿದೆ. ರೈತರು ಈ ಕೇಂದ್ರದಲ್ಲಿರುವ ಆರು ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಇಳುವರಿ ಹೆಚ್ಚಳ ಮಾಡುವುದರ ಜತೆಗೆ ಆದಾಯ ದ್ವಿಗುಣಗೊಳಿಸಬೇಕು ಎಂದರು.

ಮಾಜಿ ಶಾಸಕ ಡಾ.ವಿ.ಐ.ಪಾಟೀಲ ಮಾತನಾಡಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯು ಸಹ ನೇರವಾಗಿ ರೈತರ ಖಾತೆಗೆ ಸಂದಾಯ ಆಗುವಂತೆ ಮಾಡಿರುವುದು ಶ್ಲಾಘನೀಯವಾಗಿದೆ. ರೈತರು ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಯಲ್ಲಿ ಖರ್ಚು ಕಡಿಮೆ ಮಾಡಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಲಾಭ ಪಡೆಯಲು ಮಣ್ಣಿನ ಪರೀಕ್ಷೆ ಆಧಾರದ ಮೇಲೆ ಗೊಬ್ಬರ ಬಳಸಬೇಕು. ಕೃಷಿ ವಿಜ್ಞಾನ ಕೇಂದ್ರದ ಸಲಹೆಯಂತೆ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ತುಬಾಕಿ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಅಭಿವೃದ್ಧಿ ಕೇಂದ್ರವಾಗಿದ್ದು, ರೈತರು ನಿಗದಿತ ಇಳುವರಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞ್ಞಾನಿಗಳಿಂದ ಸಲಹೆ ಪಡೆಯಬೇಕು ಎಂದು ಹೇಳಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ವಿಜ್ಞಾನಿ ಶ್ರೀದೇವಿ ಅಂಗಡಿ, ಕೇಂದ್ರದ ವಿಜ್ಞಾನಿ ಎಸ್.ಎಂ.ವಾರದ, ಡಾ.ಎಸ್.ಎಸ್. ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net