ಕೃಷಿ ಸಾಲ ಸದ್ಬಳಕೆ ಮಾಡಿಕೊಳ್ಳಲು ಸಲಹೆ

16 HANUR 2
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಸಾಲವನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕೃಷಿಯಲ್ಲಿ ಅಭಿವೃದ್ಧಿ ಹೊಂದಿ ಆರ್ಥಿಕವಾಗಿ ಸಬಲರಾಗಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಎಂಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಫಲಾನುಭವಿಗಳಿಗೆ ಕೆಸಿಸಿ ಬೆಳೆ ಸಾಲದ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.

ನಾನು ಎಂಸಿಡಿಸಿಸಿ ಹಾಗೂ ಅಪೆಕ್ಸ್ ಬ್ಯಾಂಕ್‌ನಲ್ಲಿ ಅಧ್ಯಕ್ಷರಾಗುವುದಕ್ಕೂ ಮುನ್ನ ಮೈಸೂರು ಜಿಲ್ಲೆಗೆ 130 ಕೋಟಿ ರೂ. ಸಾಲ ನೀಡಲಾಗಿದ್ದು, ಚಾಮರಾಜನಗರಕ್ಕೆ 28 ಕೋಟಿ ರೂ.ಗೆ ಸೀಮಿತವಾಗಿತ್ತು. ಇದರಿಂದ ಜಿಲ್ಲೆಯನ್ನು ಕಡೆಗಣಿಸಲಾಗಿದ್ದು ರೈತರು ಸಾಲಸೌಲಭ್ಯದಿಂದ ವಂಚಿತರಾಗಿದ್ದರು. ಅಧ್ಯಕ್ಷನಾದ ಬಳಿಕ ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಲಾಗಿ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾಲ ವಸೂಲಾತಿಯಾಗುತ್ತಿದೆ. ಈ ಕಾರಣಕ್ಕೆ ಮೈಸೂರು ಜಿಲ್ಲೆಗೆ ಹೆಚ್ಚಿನ ಸಾಲ ನೀಡಲಾಗುತ್ತದೆ. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿದಾಗ ಮೈಸೂರು ಜಿಲ್ಲೆಯಲ್ಲಿ ಶೇ.65 ಸಾಲ ವಸೂಲಾತಿಯಾಗಿದ್ದರೆ, ಚಾ.ನಗರದಲ್ಲಿ ಶೇ.92 ಆಗಿತ್ತು. ಇದನ್ನು ಮನಗಂಡು ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 102 ಕೋಟಿ ರೂ. ಸಾಲ ಮಂಜೂರು ಮಾಡಿಸಲಾಯಿತು. ಈ ಬಗ್ಗೆ ರೈತರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿತ್ತು ಎಂದರು.

ಪಟ್ಟಣದ ಎಂಸಿಡಿಸಿಸಿ ಬ್ಯಾಂಕ್ ಈ ಹಿಂದೆ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇದರಿಂದ ಅಗತ್ಯ ಸೌಕರ್ಯಗಳ ಕೊರತೆಯಿಂದ ರೈತರು ಹಾಗೂ ಅಧಿಕಾರಿಗಳು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ವ್ಯಾಪಾರ, ವಹಿವಾಟಿನಿಂದ ಹೆಚ್ಚಿನ ಲಾಭ ಗಳಿಸುತ್ತಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಇದೀಗ ಶೂನ್ಯ ಬಡ್ಡಿ ದರದಲ್ಲಿ 1.12 ಕೋಟಿ ರೂ.ಗಳನ್ನು 103 ರೈತರಿಗೆ ಸಾಲಸೌಲಭ್ಯವನ್ನು ನೀಡಲಾಗುತ್ತಿದೆ. ಆದ್ದರಿಂದ ಪಡೆದ ಸಾಲವನ್ನು ಪ್ರತಿಯೊಬ್ಬರೂ ನಿಗದಿತ ಅವಧಿಯೊಳಗೆ ಮರು ಪಾವತಿಸುವುದರ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಶಾಸಕರನ್ನು ಸನ್ಮಾನಿಸಲಾಯಿತು. ಎಂಸಿಡಿಸಿಸಿ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ಸೋಮಣ್ಣ, ಪಿಎಸಿಸಿ ಅಧ್ಯಕ್ಷ ನಟರಾಜು, ಉಪಾಧ್ಯಕ್ಷ ಸೈಯದ್ ಭಾಷಾ, ನಿರ್ದೇಶಕರಾದ ರಾಚಪ್ಪ, ಶಂಕರೇಗೌಡ, ಮಂಜೇಶ್, ಶ್ರೀನಿವಾಸ್‌ಗೌಡ, ಗೋವಿಂದ, ಬಸವರಾಜು, ಎಂಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಕುಮಾರಸ್ವಾಮಿ, ಪಿಎಸಿಸಿಯ ಸಿಇಒ ಬಸವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net