ಕೃಷಿ ಹೊಂಡ ಯೋಜನೆಗೆ ಮರು ಚಾಲನೆ ಕೊಡಿಸಿ

18M.D.R.3
ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರಾಜೇಶ್, ಸೋಂಪುರ ಉಮೇಶ್, ಸಕ್ಕರೆ ನಾಗರಾಜು, ಹಾಗಲಹಳ್ಳಿ ಬಸವರಾಜು, ಲಕ್ಷ್ಮಣಗೌಡ, ಶ್ರೀನಿವಾಸ್ ಇದ್ದರು.
Published on

ಮದ್ದೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಲಾಯಿತು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಕೃಷಿ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುತ್ತಿದ್ದರು. ಆದರೆ ಸದರಿ ಯೋಜನೆಯನ್ನು ಕಳೆದ ವರ್ಷದಿಂದ ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಇದನ್ನು ದಿಶಾ ಸಭೆಯಲ್ಲಿ ಚರ್ಚಿಸಿ ಮರು ಚಾಲನೆ ನೀಡಬೇಕು ಎಂದು ಮನವಿ ಮಾಡಿದರು.

ಕಬ್ಬು, ಭತ್ತ, ರಾಗಿ ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ಧನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸುವ ಮೂಲಕ ಸಂಕಷ್ಟದಲ್ಲಿರುವ ರೈತರನ್ನು ಪಾರು ಮಾಡಬೇಕು ಎಂದರು.

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ವಿಳಂಬವಾಗುವುದರ ಜತೆಗೆ ಕಳಪೆಯಾಗಿದೆ. ಈ ಸಂಬಂಧ ಅಗತ್ಯ ಕ್ರಮ ವಹಿಸಬೇಕು ಎಂದು ಗಮನ ಸೆಳೆದರು. ಮನವಿ ಆಲಿಸಿದ ಸಂಸದೆ, ಶೀಘ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ವೇದಿಕೆ ತಾಲೂಕು ಅಧ್ಯಕ್ಷ ತಿಪೂರು ರಾಜೇಶ್, ಮುಖಂಡರಾದ ಸೋಂಪುರ ಉಮೇಶ್. ಸಕ್ಕರೆ ನಾಗರಾಜು, ಹಾಗಲಹಳ್ಳಿ ಬಸವರಾಜು, ಲಕ್ಷ್ಮಣಗೌಡ, ನಿವೃತ್ತ ಯೋಧ ಶ್ರೀನಿವಾಸ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net