

ಬೆಳಗಾವಿ: ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಇಲಾಖೆಯಿಂದ ಐದು ವರ್ಷಗಳಲ್ಲಿ ನಿರ್ಮಿಸಿದ ಕೃಷಿ ಹೊಂಡಗಳ ಸ್ಥಿತಿಗತಿ ಹಾಗೂ ಅವುಗಳಿಗೆ ತಡೆಗೋಡೆ ನಿರ್ಮಿಸಿರುವ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ, ಅಂಗನವಾಡಿಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಗುಣಮಟ್ಟ ಪರಿಶೀಲಿಸಿ ವರದಿ ಸಲ್ಲಿಸಿ, ಅನುದಾನ ಕಾಮಗಾರಿಗೆ ಟೆಂಡರ್ ಕರೆಯದ ಅಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಲ್ಕನೇ ತ್ರೆಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ದುರ್ಯೋಧನ ಐಹೊಳೆ, ಬಾಬಾಸಾಹೇಬ ಪಾಟೀಲ, ಆಸ್ೀ ಸೇಠ್, ಗಣೇಶ ಹುಕ್ಕೇರಿ, ವಿಶ್ವಾಸ ವೈದ್ಯ ಹಾಗೂ ಎಂಎಲ್‌ಸಿ ನಾಗರಾಜ ಯಾದವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ವಿಳಂಬಕ್ಕೆ ಅಕಾರಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕಾರಿಗಳ ವಿರುದ್ಧ ಆಕ್ರೋಶ: ಶಾಸಕರ ಅನುದಾನದಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಟೆಂಡರ್ ಕರೆಯಲು ನಾಲ್ಕು ವರ್ಷ ಬೇಕು. ಶಾಸಕರೇ ೈಲ್ ಹಿಡಿದು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದೆ. ಇಲಾಖೆಗಳಲ್ಲಿ ಶಾಸಕರಿಗೆ ಮರ್ಯಾದೆ ಇಲ್ಲದಂತಾಗಿದೆ. 6 ಲಕ್ಷ ರೂ. ಕಾಮಗಾರಿ ಟೆಂಡರ್ ಕರೆಯಲು ಒಂದು ವರ್ಷ ಬೇಕು. ಆಡಳಿತ ನಿರ್ವಹಿಸಲು ಜಿಪಂ ಸಿಇಒ, ಜಿಲ್ಲಾಕಾರಿಗಳು ಸಂಪೂರ್ಣ ವಿಲರಾಗಿದ್ದಾರೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ತಿಂಗಳು ನಡೆಸಿ ಸಮಸ್ಯೆ ಆಲಿಸಿ: ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ, ಮುಂದಿನ ಕೆಡಿಪಿ ಸಭೆಯೊಳಗಾಗಿ ಸಚಿವರ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಸ್ಯೆ ಪರಿಹರಿಸಬೇಕು. ಶಾಸಕರಿಗೆ ಸ್ಪಂದಿಸದಿರುವ, ಸಭೆಗಳಿಗೆ ಗೈರಾಗುತ್ತಿರುವ ಅಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಕೃಷಿ ಹೊಂಡಗಳಿಗೆ ತಡೆಗೋಡೆ ನಿರ್ಮಿಸಿರುವ ಕುರಿತು ಪರಿಶೀಲನೆ ನಡೆಸಿ. ಜಲಜೀವನ್ ಮಿಷನ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಆಯಾ ಕ್ಷೇತ್ರದ ಶಾಸಕರೊಂದಿಗೆ ಪ್ರತಿ ತಿಂಗಳು ಅಕಾರಿಗಳು ಸಭೆ ನಡೆಸಿ ಸಮಸ್ಯೆ ಆಲಿಸಬೇಕು ಎಂದು ಡಿಸಿ, ಸಿಇಒಗೆ ಸೂಚನೆ ನೀಡಿದರು.
ೆಟೋ ಸಹಿತ ಮಾಹಿತಿ ನೀಡಿ: ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ನಿರ್ಮಿಸಲಾದ ಕೃಷಿ ಹೊಂಡಗಳಿಗೆ ತಡೆಗೋಡೆ ನಿರ್ಮಿಸಿರುವುದು, ಕೃಷಿ ಹೊಂಡಗಳ ಸ್ಥಿತಿಗತಿ ಕುರಿತು ೆಟೋ ಸಹಿತ ಮಾಹಿತಿ ನೀಡಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಅಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಪಡೆದ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ವಿದ್ಯಾರ್ಥಿನಿ ರೂಪಾ ಪಾಟೀಲ ಸೇರಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಎಲ್ಲ ತಾಲೂಕುಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ(ಬ್ಯಾಡಗಿ) ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸ್ಪಿ ಡಾ.ಭೀಮಾಶಂಕರ ಗುಳೇದ, ನಾಮನಿರ್ದೇಶಿತ ಸದಸ್ಯರು ಇದ್ದರು.
ಈಗಾಗಲೇ ಜಿಲ್ಲೆಗೆ ಮಂಜೂರಾಗಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಇದಕ್ಕಾಗಿ ಸೂಕ್ತ ನಿವೇಶನ ಗುರುತಿಸಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನುರಿತ ತಜ್ಞ ವೈದ್ಯರ ಹಾಗೂ ಸಿಬ್ಬಂದಿ ನೇಮಕಾತಿ ಕುರಿತು ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.