

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನ ದುಃಖದ ಸಂಗತಿ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಂತಾಪ ವ್ಯಕ್ತಪ ಡಿಸಿದ್ದಾರೆ. ಮೂರ‌್ನಾಲ್ಕು ತಿಂಗಳ ಹಿಂದೆ ಕೃಷ್ಣ ಅವರನ್ನು ನಾನು ವಿಮಾನ ಪ್ರಯಾಣವೊಂದರ ಸಂದರ್ಭದಲ್ಲ್ಲಿ ಭೇಟಿ ಮಾಡಿದ್ದೆ. ಆಗ ಅ ವರು ಜನಸೇವೆ ಕುರಿತು ಹಿತವಚನದ ಮೂಲಕ ನನಗೆ ರಾಜಕೀಯ ಮಾರ್ಗದರ್ಶನ ಮಾಡಿದ್ದರು. ಪ್ರಚಲಿತ ರಾಜಕೀಯ ವಿದ್ಯಮಾನ ಗಳ ಕುರಿತು ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಅವರಿಂದ ಆಶೀರ್ವಾದ ಪಡೆದಿದ್ದು ನನ್ನ ಪುಣ್ಯ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಪಪ್ಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.