ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ

IMG-20250707-WA0040
Published on

ಕೃಷ್ಣಾ ನದಿ ನೀರಿನ ಮಟ್ಟ ಕೊಂಚ ಏರಿಕೆ

ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ

ಕಳೆದ ಒಂದು ವಾರದಿಂದ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದಲ್ಲಿ ಮಳೆ ಪ್ರಮಾಣ ತಗ್ಗಿದರಿಂದ ನದಿ ದಡದ ಜನತೆ ನಿರಾಳರಾಗಿದ್ದರು. ಆದರೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ಮತ್ತೆ ನದಿಗಳ ನೀರಿನ ಮಟ್ಟ ಗುರುವಾರ ಏರಿಕೆ ಕಂಡಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಕೋಯ್ನಾ ಜಲಾಶಯ ಸದ್ಯ 76 ಟಿಎಂಸಿ ಭರ್ತಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಒಟ್ಟು 71 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿರುವ ಪರಿಣಾಮ ನದಿ ನೀರಿನ ಮಟ್ಟ ಮತ್ತೆ ಎರಡು ಅಡಿಯಷ್ಟು ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net