

ಕೃಷ್ಣಾ ನದಿ ತೀರದಲ್ಲಿ ಮುಂದುವರೆದ ಪ್ರವಾಹದ ಆತಂಕ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ
ಮಹಾರಾಷ್ಟçದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯ ಭರ್ತಿ ಹಂತ ತಲುಪಿದೆ. ಪರಿಣಾಮ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ಚಿಕ್ಕೋಡಿ ಉಪ ವಿಭಾಗದಲ್ಲಿ ಮಳೆ ತಗ್ಗಿದರೂ ಪ್ರವಾಹದ ಆತಂಕ ಮನೆ ಮಾಡಿದೆ.
ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ,ದೂಧಗಂಗಾ, ವೇದ ಗಂಗಾ ನದಿಗಳು ಅಪಾಯದ ಮಟ್ಟ ಮಿರಿ ಹರಿಯುತ್ತಿವೆ.ಕೃಷ್ಣಾ ನದಿಗೆ ಮಹಾರಾಷ್ಟçದ ರಾಜಾಪುರ ಬ್ಯಾರೇಜ್‌ದಿಂದ ೧.೧೦ ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ.ಕೃಷ್ಣಾ ನದಿಗೆ ಒಟ್ಟು ೧.೩೦ ಲಕ್ಷ ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದ್ದರಿಂದ ನದಿ ತನ್ನ ಪಾತ್ರ ಬಿಟ್ಟು ಹರಿಯಲಾರಂಭಿಸಿದೆ.ಕೆಳ ಹಂತದ ಬಹುತೇಕ ಸೇತುವೆಗಳು ಜಲಾವೃತಗೊಂಡಿವೆ.
ಮಹಾ ಕಂಟಕ:
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಪ್ರಮಾಣ ತಗ್ಗಿದೆ. ಆದರೆ ಮಹಾರಾಷ್ಟçದ ಕೊಂಕಣ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಮಹಾಬಳೇಶ್ವರದಲ್ಲಿ ೮.೭ ಸೆಂ.ಮಿ ಮಳೆ ದಾಖಲಾಗಿದೆ. ೧೦೫ ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ ಸದ್ಯ ೮೫ ಟಿಎಂಸಿ ಭರ್ತಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಲಾಶದಿಂದ ೨೧ ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದ್ದು, ಯಾವಾಗ ಬೇಕಾದರೂ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಸಾಧ್ಯತೆ ಇದ್ದು,ಇದರಿಂದ ಕೃಷ್ಣಾ ಹಾಗೂ ಉಪ ನದಿಗಳ ತೀರದಲ್ಲಿ ಮಹಾ ಕಂಟಕ ಎದುರಾಗುವ ಸಾಧ್ಯತೆ ಇದೆ.
ಭಾಕ್ಸ
ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಾದ ಯಡೂರ,ಅಂಕಲಿ,ಮಾAಜರಿ,ಇAಗಳಿ,ಬಾವನಸೌAದತ್ತಿ ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ನದಿ ಅಪಾಯದ ಮಟ್ಟ ಮಿರಿ ಹರಿಯುತ್ತಿರುವ ಕಾರಣ ನದಿ ದಡದ ಕೃಷಿ ಜಮೀನಿಗೆ ನೀರು ನುಗ್ಗುತ್ತಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ.