ಕೆ.ಆರ್.ನಗರದಲ್ಲಿ ಬಿಜೆಪಿ ಗೆಲ್ಲಿಸಲು ಶ್ರಮ

21 H.P.GOPAL-1
ಗೋಪಾಲ್
Published on

ಕೆ.ಆರ್.ನಗರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಂಘಟನೆ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದು ಬಿಜೆಪಿ ಮಾಧ್ಯಮ ಜಿಲ್ಲಾ ಸಂಚಾಲಕ ಎಚ್.ಪಿ.ಗೋಪಾಲ್ ಹೇಳಿದರು.

ತಾಲೂಕಿನಲ್ಲಿ ಪಕ್ಷ ಸದೃಢವಾಗಿದ್ದರೂ ಹಲವು ಕಾರಣಗಳಿಂದ ಅಧಿಕಾರಕ್ಕೆ ಬರುತ್ತಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವ ಮೂಲಕ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಮ್ಮ ಪಕ್ಷ ಹಿಂದುತ್ವ ಮತ್ತು ರಾಷ್ಟ್ರೀಯವಾದದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲಿದೆ. ಕ್ಷೇತ್ರದಲ್ಲಿ ಪಕ್ಷದಿಂದ ಹಲವರು ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ತಿಳಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಕೆ.ವೈ.ಮಂಜು, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್, ಮಾರ್ಕಂಡಯ್ಯ, ಪುರಸಭಾ ಸದಸ್ಯರಾದ ಕೆ.ಬಿ.ವೀಣಾವೃಷಬೇಂದ್ರಪ್ಪ, ಜಿ.ಪಿ.ಮಂಜು, ಜಿಲ್ಲಾ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಸ್ವಪ್ನಾ ನಾಗೇಶ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮೇಲೂರು ಮಂಜು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net