ಕೆ.ಎಂ.ದೊಡ್ಡಿಯಲ್ಲಿ ಭಾಗಶಃ ಯಶಸ್ವಿ

23KMD-1
Published on

ಕೆ.ಎಂ.ದೊಡ್ಡಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಸ್ವಯಂ ಘೋಷಿತ ಬಂದ್‌ಗೆ ಕೆ.ಎಂ.ದೊಡ್ಡಿಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು.


ವರ್ತಕರ ಸಂಘ ಸೇರಿದಂತೆ ರೈತರು, ವಿವಿಧ ಪ್ರಗತಿ ಪರ ಸಂಘಟನೆಗಳು ರಸ್ತೆಗಿಳಿದು ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಬಂದ್ ಹಿನ್ನೆಲೆ ಪಟ್ಟಣ ಸ್ತಬ್ಧವಾಗಿತ್ತು. ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು. ಕಬ್ಬು ತುಂಬಿದ ಎತ್ತಿನಗಾಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಅಲ್ಲದೇ ವರ್ತಕರು ಸಹ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟಗಳನ್ನು ಮುಚ್ಚಿ ಬಂದ್ ಬೆಂಬಲ ಸೂಚಿಸಿದರು. ಶಾಲಾ, ಕಾಲೇಜುಗಳು ಮಧ್ಯಾಹ್ನದವರೆಗೆ ಕಾರ್ಯ ನಿರ್ವಹಿಸಿದವು.


ಜಿ.ಪಂ.ಮಾಜಿ ಸದಸ್ಯ ಎ.ಎಸ್.ರಾಜೀವ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಣ್ಣೂರು ಮಹೇಂದ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಹಾಗಲಹಳ್ಳಿ ಚಿಕ್ಕತಿಮ್ಮೇಗೌಡ, ಕಾವೇರಿ ನೀರಾವರಿ ನಿಗಮದ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗಲಹಳ್ಳಿ ಬಸವರಾಜೇಗೌಡ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಹಳ್ಳಿ ದೊಡ್ಡೇಗೌಡ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಬೋರೇಗೌಡ, ವರ್ತಕ ಸಂಘದ ಉಪಾಧ್ಯಕ್ಷ ರಂಗೋಲಿ ರವಿ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net