ಕೆ.ಎಚ್. ಪಾಟೀಲ ಪುತ್ಥಳಿ ಮರು ಸ್ಥಾಪನೆಗೆ ಆಗ್ರಹ

h6-K.H.Patil
Published on

ಹುಬ್ಬಳ್ಳಿ: ತೆರವುಗೊಳಿಸಲಾದ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಯನ್ನು ಮೂಲ ಸ್ಥಳದಲ್ಲಿಯೇ ವಿಧಿ ವಿಧಾನಗಳ ಮೂಲಕ ಮರು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಕೆ.ಎಚ್. ಪಾಟೀಲರ ಪುತ್ಥಳಿ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿಯ ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಆಯುಕ್ತರ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ ಅವರಿಗೆ ಮನವಿ ಸಲ್ಲಿಸಿದರು.

ಪುತ್ಥಳಿ ಸ್ಥಳಾಂತರಕ್ಕೆ ನಮ್ಮ ವಿರೋಧವಿಲ್ಲ. ಸ್ಥಳಾಂತರಿಸಿದ ವಿಧಾನಕ್ಕೆ ನಮ್ಮ ವಿರೋಧವಿದೆ. ಕೆ.ಎಚ್. ಪಾಟೀಲ ಪ್ರತಿಷ್ಠಾನಕ್ಕೆ ಯಾವುದೇ ಮಾಹಿತಿ ನೀಡದೆ ಪುತ್ಥಳಿಯನ್ನು ರಾತ್ರೋರಾತ್ರಿ ಸ್ಥಳಾಂತರಿಸಿರುವುದು ನೋವುಂಟು ಮಾಡಿದೆ. ಇದು ಅತ್ಯಂತ ಖಂಡನೀಯ ಎಂದು ಮನವಿಯಲ್ಲಿ ಹೇಳಿದೆ.

ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಶಾಸಕ ಎನ್.ಎಚ್. ಕೊನರಡ್ಡಿ, ಪಾಲಿಕೆ ಸದಸ್ಯರಾದ ಎಸ್. ಸಂದಿಲಕುಮಾರ, ಇಕ್ಬಾಲ ನವಲೂರ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಅಲ್ತಾಫ್ ಹಳ್ಳೂರ, ಅನಿಲಕುಮಾರ ಪಾಟೀಲ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net