ವಿರಾಜಪೇಟೆ : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಕೆ.ಪಿ.ಧಿಥ್ಯಾಗೆ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್, ರೋಟರಿ ಕ್ಲಬ್ ಹಾಗೂ ದಿನೇಶ್ ಫೌಂಡೇಷನ್ ಸಹಯೋಗದೊಂದಿಗೆ ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಜೆಎಸ್‌ಎಸ್ ಶಾಲೆಯ ಶ್ರೀ ಘನಲಿಂಗ ಶಿವಯೋಗಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕನ್ನಡ ಸಾಹಿತ್ಯ ಸಂಭ್ರಮ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇವರು ವಿರಾಜಪೇಟೆ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಪ್ರಸ್ತುತ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ವಿರಾಜಪೇಟೆಯ ಪೃಥ್ವಿ ಕುಮಾರ್ ಹಾಗೂ ಭವ್ಯಾ ದಂಪತಿ ಪುತ್ರಿ.