ಕೆಂಕೆರೆ ಪಂಚಾಯಿತಿ ಎದುರು ಗ್ರಾಮಸ್ಥರ ಪ್ರತಿಭಟನೆ

ಹಳೇ ವಿದ್ಯಾರ್ಥಿ ಸಂಘ ಕೆಂಕೆರೆ, 1
ಗ್ರಾಮದ ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಂಕೆರೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಮುಖಂಡರಿಂದ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು. ಹಳೆಯ ವಿದ್ಯಾರ್ಥಿ ಸಂಘದ ಮುಖಂಡ ಶಶಿಧರ್, ಗ್ರಾಮದ ಪ್ರಮುಖರು, ಸಂಘ, ಸಂಸ್ಥೆ ಪ್ರಮುಖರು ಹಾಜರಿದ್ದರು.
Published on

ಗಂಡಸಿ ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘ, ಸಂಸ್ಥೆಗಳ ನೇತೃತ್ವದಲ್ಲಿ

ಕೆಂಕೆರೆ ಪಂಚಾಯಿತಿ ಎದುರು ಗ್ರಾಮಸ್ಥರ ಪ್ರತಿಭಟನೆ ನಡೆಸಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘ, ಕೆಂಕೆರೆ ಸ್ತ್ರೀ ಶಕ್ತಿ ಸಂಘ, ರೈತ ಸಂಘಟನೆಗಳು ಜಂಟಿಯಾಗಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆಸ್ಪತ್ರೆ ಸೌಲಭ್ಯ, ಶುದ್ಧ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿ, ಅರಸೀಕೆರೆ, ಹಾಸನಕ್ಕೆ ನೇರ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಲಾಯಿತು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿ ಚುರುಕುಗೊಳಿಸಲಾಗುವುದು. ಕೆಂಕೆರೆಯಿಂದ ಅರಸೀಕೆರೆ, ಹಾಸನಕ್ಕೆ ನೇರ ಬಸ್ ವ್ಯವಸ್ಥೆ ಕಲ್ಪಿಸಲು ಹಾಸನ ಡಿಪೋ ಮ್ಯಾನೇಜರ್ ಜತೆ ಮಾತುಕತೆ ನಡೆಸಿ 3 ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಮದಲ್ಲಿ ಇರುವ 2 ಸಮುದಾಯ ಭವನಗಳನ್ನು ರಿಪೇರಿ ಮಾಡಿಸಿ ಸಾರ್ವಜನಿಕರ ಶುಭಕಾರ್ಯಗಳಿಗೆ ನೀಡಲಾಗುವುದು ಎಂದರು.

ಬಂದನಹಳ್ಳಿ ಗಡಿಯಿಂದ ಬುಧವಾರದ ಸಂತೆಯವರೆಗೆ ರಸ್ತೆ ವಿಸ್ತರಣೆ, ಕೆಂಕೆರೆ ಕೆರೆಗೆ ಹೇಮಾವತಿ ನೀರಾವರಿ ಯೋಜನೆ

ನೀರು ಲಭ್ಯತೆ, ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ಹೆರಿಗೆ ಸೌಲಭ್ಯ, ಪ್ರಾಥಮಿಕ, ಪ್ರೌಢಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಇತ್ಯಾದಿ ಬೇಡಿಕೆಗಳ ಬಗ್ಗೆ ಶಾಸಕ, ಸಂಸದರೊಂದಿಗೆ ಚರ್ಚಿಸಲಾಗುವುದು ಎಂದು ತಹಸೀಲ್ದಾರ್ ಹೇಳಿದರು.

ವಿಶ್ವಾಸ ಇರಿಸಿದ್ದೇವೆ: ಹಳೆಯ ವಿದ್ಯಾರ್ಥಿ ಸಂಘದ ಮುಖಂಡ ಶಶಿಧರ್ ಮಾತನಾಡಿ, ತಹಸೀಲ್ದಾರ್ ನೀಡಿದ ಭರವಸೆಗಳ ಮೇಲೆ ವಿಶ್ವಾಸ ಇರಿಸಿ ಪ್ರತಿಭಟನೆ ವಾಪಸ್ ತೆಗೆದುಕೊಂಡಿದ್ದೇವೆ. ನಿಗದಿತ ಅವಧಿಯಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದ ಮತ್ತೆ

ಬೀದಿಗಿಳಿದು ಪ್ರತಿಭಟನೆ ಮಾಡಲಾಗುವುದು ಎಂದರು. ಗ್ರಾಮದ ಮುಖಂಡರು, ವಿವಿಧ ಸಂಘಟನೆ ಪ್ರಮುಖರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net