ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ

24,,kkr1( kenkeramma
Published on

ಕಿಕ್ಕೇರಿ: ಹೋಬಳಿಯ ಮಾದಾಪುರ ಗ್ರಾಮದಲ್ಲಿ ಕೆಂಕೇರಮ್ಮ ದೇವಿಗೆ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಕೆಂಕೇರಮ್ಮ ಚಾರಿಟಬಲ್ ಟ್ರಸ್ಟ್‌ನಿಂದ ನಡೆದ ವಿಶೇಷ ಪೂಜೆಯಲ್ಲಿ ದೇವಿಗೆ ಗಂಗಾಜಲಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಡೆಯಿತು. ಮಹಿಳೆಯರು ಲಲಿತಾ ಸಹಸ್ರನಾಮ ಪಠಿಸಿದರು. ವಿಶೇಷ ಪೂಜೆ ಅಂಗವಾಗಿ ದೇಗುಲವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ವಿಪ್ರ ವೃಂದ ಸಮುದಾಯದಿಂದ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net