

ಕಲಬುರಗಿ: ಗುತ್ತೇದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದರು
ಎಂಟು ತಿಂಗಳಿಂದ ಕೆಂಪಣ್ಣ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಭೇಟಿ ಆಗಿ ಮನೆಯಿಂದ ಹೊರಬಂದು ಕೆಂಪಣ್ಣ ಹೇಳಿಕೆ ನೀಡುತ್ತಿದ್ದಾರೆ.
ಕೆಂಪಣ್ಣ ಹೇಳಿಕೆ ಕಾಂಗ್ರೆಸ್ ಸ್ಫಾನ್ಸರ್ ಮಾಡಿದ್ದಾಗಿದೆ. ರಾಜ್ಯದ ಎಲ್ಲ ಶಾಸಕರು 40 ಪರ್ಸೆಂಟ್ ಪಡೆಯುತ್ತಿದ್ದಾರೆ ಎಂದಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿಕೆಶಿಯೂ ಇದ್ದಾರೆ ಎಂದು ಕಿಡಿ ಕಾರಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೆಂಪಣ್ಣನ ವಿರುದ್ಧ ಮಾನನಷ್ಟ ಮೊಕ್ಕದಮ್ಮೆ ಹೂಡುತ್ತೇವೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 2018ರಲ್ಲಿಯೇ ಜನರು ಜಾಗ ಖಾಲಿ ಮಾಡಿಸಿದ್ದಾರೆ. ತಲೆಯಲ್ಲಿ ಏನು ಇಲ್ಲದಕ್ಕೆ ಹೀಗೆ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.