ಕೆಂಪೇಗೌಡ ಜಯಂತಿ ಆಚರಣೆಗೆ ಸಹಕಾರ ನೀಡಿ

17blrp6
Published on

ಬೇಲೂರು: ಈ ಬಾರಿ ಬೇಲೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಮಾಜದ ಮುಖಂಡರು ಸಹಕಾರ ನೀಡಬೇಕೆಂದು ಶಾಸಕ ಎಚ್.ಕೆ.ಸುರೇಶ್ ಮನವಿ ಮಾಡಿದರು.

ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರೆಯಲಾಗಿದ್ದ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 15 ವರ್ಷಗಳಿಂದ ಒಕ್ಕಲಿಗರ ಯುವ ವೇದಿಕೆ ಮುಂದಾಳತ್ವದಲ್ಲಿ ಸಮುದಾಯದ ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಜಯಂತಿ ಆಚರಿಸಲಾಗುತ್ತಿದೆ. ಈ ಬಾರಿಯ ಜಯಂತಿಯನ್ನು ಮನೆ ಹಬ್ಬದಂತೆ ಆಚರಿಸಲು ಪ್ರತಿಯೊಬ್ಬರೂ ವೈಯಕ್ತಿಕ ಹಿತಾಸಕ್ತಿ ಹಾಗೂ ರಾಜಕಾರಣ ಬದಿಗಿಟ್ಟು ಸಹಕಾರ ನೀಡಬೇಕು. ಅಂದಿನ ಕಾರ್ಯಕ್ರಮವನ್ನು ಶ್ರೀ ಶಂಭುನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಆಚರಿಸೋಣ ಎಂದರು.

ಕೆಂಪೇಗೌಡ ಸೇವಾ ಸಮಿತಿ ಅದ್ಯಕ್ಷ ಎಂ.ಎ.ನಾಗರಾಜ್ ಮಾತನಾಡಿ, ಕಳೆದ ಸಾಕಷ್ಟು ವರ್ಷಗಳಿಂದಲೂ ಸಮುದಾಯದ ಯುವಕರ ತಂಡ ಕೆಂಪೇಗೌಡರ ಜಯಂತಿ ಆಚರಿಸಿಕೊಂಡು ಬಂದಿದ್ದು, ಸಮುದಾಯದವರು ಅವರಿಗೆ ಸಹಕಾರ ನೀಡುತ್ತಿದ್ದೇವೆ. ಈ ಬಾರಿ ಅದ್ದೂರಿಯಾಗಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಜೂ.30ರಂದೂ ಆಚರಿಸಲು ತೀರ್ಮಾನಿಸಿದ್ದು, ಅದಕ್ಕೆ ತಾಲೂಕಿನ ಸಮುದಾಯದವರು ಸಹಕಾರ ನೀಡಬೇಕು ಎಂದು ಹೇಳಿದರು.

ಒಕ್ಕಲಿಗರ ಯುವ ವೇದಿಕೆ ಅದ್ಯಕ್ಷ ಗಿರೀಶ್, ಕೆಂಪೇಗೌಡ ಸೇವಾ ಸಮಿತಿ ಅಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ಪೃಥ್ವಿ, ಉಪಾಧ್ಯಕ್ಷ ಎಂ.ಡಿ.ದಿನೇಶ್, ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಬಿ.ಗಿರೀಶ್, ರಾಜೇಗೌಡ, ನಿಶಾಂತ್, ಅಭಿಗೌಡ, ಗಣೇಶ್, ದೀಪು, ಡಾ.ರಘುಚರಣ್, ಕಸಾಪ ಅಧ್ಯಕ್ಷ ಮಂಜೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net