

ಚಾಮರಾಜನಗರ: ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ಬೆಂಗಳೂರುನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪುತ್ಥಳಿಯ ಮೆರವಣಿಗೆ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಂಪೇಗೌಡ ಯುವಬಳಗ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆಯನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಯುವಕರು ಪಟಾಕಿಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು. ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ರಾಮಮಂದಿರದ ಬಳಿ ಮುಕ್ತಾಯಗೊಂಡಿತು. ಗ್ರಾಮಸ್ಥರ ವತಿಯಿಂದ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯ ಉಮಾಶಂಕರ್, ದೀಪು, ಸಂತೋಷ್, ಚಾಮರಾಜನಗರ-ಮೈಸೂರು ಒಕ್ಕಲಿಗರ ಸಂಘದ ನಿರ್ದೇಶಕ ಪಿ.ಎಚ್.ರಾಜು, ತಾಲೂಕು ಉಪಾಧ್ಯಕ್ಷ ಪಿ.ಕೆ.ರಾಜು, ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಕೆ.ದೇವರಾಜ್, ಎಂಪಿಸಿಎಸ್ ಅಧ್ಯಕ್ಷ ಜೆ.ರವಿ, ಉಪಾಧ್ಯಕ್ಷ ಸುನೀಲ್, ಎಸ್‌ಡಿಎಂಸಿ ಅಧ್ಯಕ್ಷ ಎಲ್.ಪ್ರಸಾದ್, ನಟರಾಜು, ರಾಜೇಶ್, ಶಿವಸ್ವಾಮಿ, ಚಂದ್ರ, ಶಂಕರ್, ಶಿವಣ್ಣ ಹಾಗೂ ಇತರರು ಭಾಗವಹಿಸಿದ್ದರು.